ಪ್ರಗತಿವಾಹಿನಿ ಸುದ್ದಿ; ವಾಷಿಂಗ್ಟನ್: ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಒಬಾಮಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಸ್ವತ: ಬರಾಕ್ ಒಬಾಮಾ ಮಾಹಿತಿ ನೀಡಿದ್ದಾರೆ.
ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಒಬಾಮ, ಕಳೆದ ಎರಡು ದಿನಗಳಿಂದ ನನಗೆ ಗಂಟಲು ಸಮಸ್ಯೆಯಿದೆ. ಅದನ್ನು ಹೊರತುಪಡಿಸಿ ಆರೋಗ್ಯವಾಗಿದ್ದೇನೆ ಎಂದು ತಿಳಿಸಿದ್ದಾರೆ.
ಪತ್ನಿ ಮಿಚೆಲ್ ಒಬಾಮ ಕೂಡ ಕೋವಿಡ್ ಟೆಸ್ಟ್ ಗೆ ಒಳಗಾಗಿದ್ದು, ನೆಗೆಟಿವ್ ಬಂದಿದೆ. ಕೋವಿಡ್ ಲಸಿಕೆ ಹಾಕಿಸದವರು ತಕ್ಷಣ ವ್ಯಾಕ್ಸಿನ್ ಹಾಕಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಪೋಷಕರ ಎದುರಲ್ಲೇ ಮಗಳನ್ನು ಕಿಡ್ನ್ಯಾಪ್ ಮಾಡಿದ ದುಷ್ಕರ್ಮಿಗಳು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ