
ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ದಾವಣಗೆರೆಯಲ್ಲಿ ನಡೆದ ಕಾರ್ಯಕ್ರಮದ ವೇಳೆ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರಿಗೆ ಆರೋಗ್ಯದಲ್ಲಿ ಏರುಪೇರಾಗಿರುವ ಘಟನೆ ನಡೆದಿದ್ದು, ಚೇತರಿಸಿಕೊಂಡಿರುವ ಬರಗೂರು ರಾಮಚಂದ್ರಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಕವಿಗೋಷ್ಠಿ ಉದ್ಘಾಟನೆ ಬಳಿಕ ಸಭಾಂಗಣದ ಹೊರಗೆ ಪೋಸ್ಟರ್ ಬಿಡುಗಡೆ ಮಾಡಲು ಹೋಗಿದ್ದೆ. ಸ್ಪರ್ಧಾ ಪರೀಕ್ಷೆ ಪೋಸ್ಟರ್ ಬಿಡುಗಡೆ ಮಾಡಿದ್ದೆವು. ಆ ಸಂದರ್ಭದಲ್ಲಿ ತಲೆ ಸುತ್ತು ಬಂತು. ಬೇಗನೇ ಹೋಗಿ ಕಾರಿನಲ್ಲಿ ಕುಳಿತುಕೊಂಡೆ. ನಂತರ ಸ್ನೇಹಿತರು ಆಸ್ಪತ್ರೆಗೆ ಕರೆದೊಯ್ದರು. ಕೆಲ ನಿಮಿಷಗಳ ಕಾಲ ನನಗೆ ಪ್ರಜ್ಞೆ ಇರಲಿಲ್ಲ. ನನಗೆ ಬಿಪಿ, ಶುಗರ್ ಇರಲಿಲ್ಲ. ಆದರೆ ಏಕಾಏಕಿ ಹೀಗಾಗಿರುವುದರಿಂದ ಬಿಪಿ, ಶುಗರ್, ಇಸಿಜಿ ಟೆಸ್ಟ್ ಮಾಡಿದರು. ಹೆಚ್ಚು ಒತ್ತಡದಿಂದ ಈ ರೀತಿಯಾಗುತ್ತದೆ ಎಂದು ಹೇಳಿದ್ದಾರೆ. ಡ್ರಿಪ್ಸ್ ಹಾಕಿದ್ದರು ವಿಶ್ರಾಂತಿ ಪಡೆದು ಈಗ ಡಿಸ್ಚಾರ್ಜ್ ಆಗಿದ್ದೇನೆ ಎಂದು ತಿಳಿಸಿದ್ದಾರೆ.
ದಾವಣಗೆರೆಯ ಹರಿಹರದಲ್ಲಿ ನಡೆದ ಬಂಡಾಯ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬರಗೂರು ರಾಮಚಂದ್ರಪ್ಪ ಇದ್ದಕ್ಕಿದ್ದಂತೆ ವೇದಿಕೆ ಮೇಲೆ ಕುಸಿದು ಬಿದ್ದಿದ್ದಾರೆ ಎಂದು ವರದಿಯಾಗಿತ್ತು. ಆದರೆ ವೇದಿಕೆಯ ಮೇಲೆ ಕುಸಿದು ಬಿದ್ದಿಲ್ಲ, ವೇದಿಕೆ ಕಾರ್ಯಕ್ರಮದ ಬಳಿಕ, ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ತಲೆ ಸುತ್ತುಬಂದ ಕಾರಣ ತಾವೇ ತಕ್ಷಣ ಕಾರಿನಲ್ಲಿ ಹೋಗಿ ಕುಳಿತಿದ್ದಾಗಿ ಅವರು ತಿಳಿಸಿದ್ದಾರೆ.
*ವೇದಿಕೆ ಮೇಲೆಯೇ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ*
https://pragati.taskdun.com/baraguru-ramachandrappacollapsedavanagere-programme/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ