Latest

*ವೇದಿಕೆ ಮೇಲೆಯೇ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ*

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಕಾರ್ಯಕ್ರಮದ ವೇದಿಕೆಯಲ್ಲಿಯೇ ಏಕಾಏಕಿ ಕುಸಿದು ಬಿದ್ದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದಿದೆ.

ಬಂಡಾಯ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬರಗೂರು ರಾಮಚಂದ್ರಪ್ಪ ಇದ್ದಕ್ಕಿದ್ದಂತೆ ವೇದಿಕೆ ಮೇಲೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಹರಿಹರ ಅಕ್ಷಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಇತ್ತೀಚಿನ ಮಾಹಿತಿ ಪ್ರಕಾರ ಬರಗೂರು ರಾಮಚಂದ್ರಪ್ಪ ಅವರ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ದಾವಣಗೆರೆ ಆಸ್ಪತ್ರೆಗೆ ಶಿಫ್ಟ್ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.

ಬಂಡಾಯ ವೇದಿಕೆಯಲ್ಲಿ ಭಾಷಣ ಮುಗಿಸಿದ ಬಳಿಕ ಬರಗೂರು ರಾಮಚಂದ್ರಪ್ಪನವರಿಗೆ ರಕ್ತದೊತ್ತಡದಲ್ಲಿ ಏರುಪೇರಾಗಿ ವೇದಿಕೆಯಲ್ಲಿಯೇ ಕುಸಿದುಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

*ಜಾತ್ರೆಯಲ್ಲಿ ಕೈ ಹಿಡಿದು ಎಳೆದಾಡಿದ ಯುವಕ; ನೊಂದ ಯುವತಿಯಿಂದ ದುಡುಕಿನ ನಿರ್ಧಾರ*

https://pragati.taskdun.com/belagavi19-years-girlsuicideathani/

Related Articles

Back to top button