*ವಾಯುಭಾರ ಕುಸಿತ: 13 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ:: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಅರಬ್ಬಿ ಸಮುದ್ರ ತೀರ ಹೊಂದಿರುವ ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳಿಗೆ ಚಂಡಮಾರುತದ ಹೊಡೆತ ತಟ್ಟಲಿದೆ. ಈ ಪೈಕಿ ಕೇರಳ ಕರ್ನಾಟಕ ಹಾಗೂ ಗುಜರಾತ್ ರಾಜ್ಯಗಳಲ್ಲಿ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ರಾಜ್ಯದ 13 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯಪುರ, ಗದಗ, ಬಾಗಲಕೋಟೆ, ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.
ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಈ ಹಿನ್ನಲೆ 13 ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಘೋಷಿಸಿದೆ. ಹಾಗೂ ಸೆಪ್ಟೆಂಬರ್ 2 ರಂದು ಹಳದಿ ಅಲರ್ಟ್ ಘೋಷಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ