Kannada NewsKarnataka News

ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬ್ಯಾರೇಜ್ ನಿರ್ಮಾಣ -ಬಾಲಚಂದ್ರ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ, ಹಳ್ಳೂರ:  ಅರಭಾವಿ ಕ್ಷೇತ್ರದ ಜನರಿಗೆ ಅವಶ್ಯವಿರುವ ಎಲ್ಲಾ ಮೂಲಭೂತ ಸೌಕರ್ಯ ಒದಗಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಗ್ರಾಮದ ಗುರುಸಿದ್ದನ್ನವರ ತೋಟದ ಹತ್ತಿರ ಹಳ್ಳಕ್ಕೆ ಬ್ರಿಡ್ಜ್ ಕಂ  ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಹೆಚ್ಚಾಗಿ ವ್ಯರ್ಥವಾಗುವ ನೀರು ಹಾಗೂ ಮಳೆ ನೀರನ್ನು ತಡೆದು ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬ್ಯಾರೇಜ್ ನಿರ್ಮಿಸಲಾಗುತ್ತಿದೆ. ಈ ಬ್ಯಾರೇಜ್ ನಿಂದ ರೈತರಿಗೆ ಬೇಸಿಗೆ ಕಾಲದಲ್ಲಿ ತುಂಬಾ ಲಾಭದಾಯಕ ಎಂದು ಹೇಳಿದರು.
ಗ್ರಾಮದ ಅಭಿವೃದ್ಧಿಗಾಗಿ ಕಳೆದ 15 ವರ್ಷಗಳಿಂದ ಸಾಕಷ್ಟು ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಇನ್ನು ಮುಂದೆಯೂ ಸಹ ಗ್ರಾಮದ ಪ್ರಗತಿಗಾಗಿ ಸರ್ಕಾರದ ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುವುದು. ಅಭಿವೃದ ಧಿ ಕಾರ್ಯಗಳಲ್ಲಿ ಎಲ್ಲರೂ ಒಂದಾಗಿ ಒಗ್ಗಟ್ಟಾಗಿ ದುಡಿಯುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಗ್ರಾಮಸ್ಥರಲ್ಲಿ ಮನವಿ ಮಾಡಿಕೊಂಡರು. ಮತ್ತು ಜನರ   ಸಮಸ್ಯೆಗಳನ್ನು ಆಲಿಸಿ, ಆದಷ್ಟು ಬೇಗ ಜನರ ಸಮಸ್ಯೆಗೆ ಪರಿಹಾರ ಒದಗಿಸುವ ಭರವಸೆಯನ್ನು ಕೂಡ ನೀಡಿದರು.
ಕೆಎಂಎಫ್ ಅಧ್ಯಕ್ಷರಾಗಿ ಮೊದಲ ಬಾರಿಗೆ ಗ್ರಾಮಕ್ಕೆ ಆಗಮಿಸಿದ ಬಾಲಚಂದ್ರ ಜಾರಕಿಹೊಳಿ ಅವರು ಗ್ರಾಮದೇವತೆ ಮಹಾಲಕ್ಷ್ಮಿಯ ದರ್ಶನ ಪಡೆದರು. ನಂತರ ವಿವಿಧ ಸಂಘ ಸಂಸ್ಥೆಗಳಿಂದ ಅವರಿಗೆ ಸತ್ಕರಿಸಿ ಸನ್ಮಾನಿಸಲಾಯಿತು.
ಪೂಜಾ ಕಾರ್ಯಕ್ರಮದಲ್ಲಿ ಜಿಪಂ ಸದಸ್ಯೆ ವಾಸಂತಿ ತೇರದಾಳ್, ತಾಪಂ ಸದಸ್ಯೆ  ಸವಿತಾ ಡಬ್ಬನವರ, ಬಿ. ಜಿ. ಸಂತಿ, ಭೀಮಶಿ ಮಗದುಮ್ಮ್, ಕುಮಾರ್ ಲೋಕನ್ನವರ್, ಶಂಕರ್ ಬೋಳನ್ನವರ, ಮಾರುತಿ ಮಾವರಕರ, ಲಕ್ಷ್ಮಣ್ ಛಬ್ಬಿ, ಲಕ್ಷ್ಮಣ್ ಕತ್ತಿ, ಉಮೇಶ್ ಸಂತಿ, ಸುರೇಶ್ ಡಬ್ಬನವರ, ಹನುಮಂತ ತೇರದಾಳ, ಮಲ್ಲಪ್ಪ ಛಬ್ಬಿ, ಅಪ್ಪಾಜಿ ಬೊಳನ್ನವರ ಹಾಗೂ ಇತರರು  ಉಪಸ್ಥಿತರಿದ್ದರು.

Related Articles

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button