
ಪ್ರಗತಿವಾಹಿನಿ ಸುದ್ದಿ: ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮದಾಪುರ ಗ್ರಾಮದಲ್ಲಿ ಮಳೆಯ ಅಬ್ಬರದಿಂದಾಗಿ ತಡೆಗೋಡೆ ಕುಸಿತವುಂಟಾಗಿ ಇಬ್ಬರು ಮಕ್ಕಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಮೃತರನ್ನು ಅಮೂಲ್ಯ(2) ಅನನ್ಯ(2) ಚೆನ್ನಮ್ಮ (30) ಎಂದು ಗುರುತಿಸಲಾಗಿದೆ. ಮತ್ತೊಬ್ಬ ವೃದ್ಧೆ ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರು ಹಾಗೂ ಪೊಲೀಸರು ಸಧ್ಯಕ್ಕೆ ಮನೆಯ ಅವಶೇಷಗಳನ್ನು ತೆರವುಗೊಳಿಸುತ್ತಿದ್ದಾರೆ. ಸ್ಥಳದಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆ ಸಹ ಉಂಟಾಗಿದ್ದು ಜನರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ