Latest

ಯತ್ನಾಳ್ ಕಾರಿಗೆ ಮುತ್ತಿಗೆ ಹಾಕಿ ಕಾರ್ಯಕರ್ತರ ಆಕ್ರೋಶ

ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಸಿಎಂ ಬಿಎಸ್ ವೈ ಅವರ ವಿರುದ್ಧ ಪದೇ ಪದೇ ಆರೋಪ ಮಾಡುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾರಿಗೆ ವೀರಶೈವ ಲಿಂಗಾಯತ ಸಂಘಟನೆ ಹಾಗೂ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಶಾಸಕ ಯತ್ನಾಳ್ ಕಾರನ್ನು ಅಡ್ಡಗಟ್ಟಿದ ಸಂಘಟನೆ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಯತ್ನಾಳ್ ವಿರುದ್ಧ ಘೋಷಣೆ ಕೂಗಿದ್ದಾರೆ.

ವೀರಶೈವ ಲಿಂಗಾಯತ ಸಮುದಾಯವನ್ನು ಒಡೆಯಲು ಯತ್ನ ನಡೆಸುತ್ತಿರುವ ಯತ್ನಾಳ್ ಗೆ ಧಿಕ್ಕಾರ ಎಂದು ಘೋಷಣೆ ಕೂಗಿದ್ದಾರೆ. ಅಲ್ಲದೇ ಪದೇ ಪದೇ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದೀರಿ, ಮೀಸಲಾತಿ ಹೋರಾಟದ ಹೆಸರಲ್ಲಿ ಬಿರುಕು ತರುವ ಹುನ್ನಾರ ನಡೆಸುತ್ತಿದ್ದೀರಿ ಇದು ವೀರಶೈವ ಲಿಂಗಾಯ ಸಮುದಾಯ ಒಡೆಯಲು ನಡೆಸುತ್ತಿರುವ ಷಡ್ಯಂತ್ರ ಎಂದು ಕಾರ್ಯಕರ್ತರು ಕಿಡಿಕಾರಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಪೊಲೀಸರು ಕಾರ್ಯಕರ್ತರನ್ನು ಚದುರಿಸಿ, ಯತ್ನಾಳ್ ಅವರನ್ನು ಗೆಸ್ಟ್ ಹೌಸ್ ಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.

ಸಿಎಂ ಯಡಿಯೂರಪ್ಪ ಭ್ರಷ್ಟಾಚಾರ ದಾಖಲೆ ಶೀಘ್ರ ಬಿಡುಗಡೆ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button