Belagavi NewsBelgaum NewsKannada NewsKarnataka NewsLatestPolitics
*ಸ್ವಪಕ್ಷದ ನಾಯಕರ ವಿರುದ್ಧ ಮತ್ತೆ ಅಸಮಾಧಾನ; ದೆಹಲಿಗೆ ಹೋಗುತ್ತಿದ್ದೇನೆ ಎಂದ ಯತ್ನಾಳ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಒಂದೆಡೆ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ವಿಪಕ್ಷ ಬಿಜೆಪಿ ನಾಯಕರು ಸರ್ಕಾರವನ್ನು ಕಟ್ಟಿಹಾಕಲು ಯತ್ನಿಸುತ್ತಿದ್ದಾರೆ. ಈ ನಡುವೆ ಸ್ವಪಕ್ಷ ಬಿಜೆಪಿ ನಾಯಕರ ವಿರುದ್ಧವೇ ಅಸಮಾಧಾನ ಹೊರಹಾಕಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ದೆಹಲಿಗೆ ಹೋಗುತ್ತೇನೆ ಎಂದಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಶಾಸಕ ಯತ್ನಾಳ್, ರಾಜ್ಯಾಧ್ಯಕ್ಷ ಅಥವಾ ವಿಪಕ್ಷ ನಾಯಕನ ಸ್ಥಾನ ತನಗೆ ಸಿಗದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ದೆಹಲಿಗೆ ಹೋಗುವುದಾಗಿ ಹೇಳಿದ್ದಾರೆ. ನಾನಾಗಿಯೆ ಹೋಗುತ್ತಿಲ್ಲ. ದೆಹಲಿಯಿಂದ ಕರೆ ಬರುವ ಸಂದೇಶ ಬಂದಿದೆ. ಕರೆ ಬಂದ ಕೂಡಲೆ ದೆಹಲಿಗೆ ತೆರಳುತ್ತೇನೆ. ಹೋಗುವುದಂತು ಖಚಿತ ಎಂದರು.
ಯಾವಾಗ ಕರೆ ಬರುತ್ತೆ ಆಗ ದೆಹಲಿಗೆ ಹೋಗುತ್ತೇನೆ. ಇಬ್ಬರು ಮಹಾನುಭಾವರಿಂದ ಕರ್ನಾಟಕದಲ್ಲಿ ಈ ಪರಿಸ್ಥಿತಿ ಬಂದಿದೆ. ದೆಹಲಿಯಲ್ಲಿ ಒಬ್ಬರು, ಕರ್ನಾಟಕದಲ್ಲಿ ಒಬ್ಬರು ಇದ್ದಾರೆ ಎಂದು ಗುಡುಗಿದರು.