
ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣ ವಿಚಾರಣೆಗೆ ವಿಶೇಷ ಕೋರ್ಟ್ ಸ್ಥಾಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಪ್ರಕರಣ ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆಯಾಗಬೇಕು. ಈ ನಿಟ್ಟಿನಲ್ಲಿ ವಿಶೇಷ ಕೋರ್ಟ್ ಸ್ಥಾಪನೆ ಬಗ್ಗೆ ಮನವಿ ಮಾಡಬೇಕು ಎಂದಿದ್ದೇನೆ. ಏನಾಗಲಿದೆ ನೋಡೋಣ ಎಂದರು.
ಪಿಎಸ್ ಐ ಅಕ್ರಮದ ಬಗ್ಗೆ ಸಿಐಡಿ ಅಧಿಕಾರಿಗಳು ಸೂಕ್ತ ತನಿಖೆ ನಡೆಸಿದ್ದಾರೆ. ಮೊನ್ನೆ ಬೆಂಗಳೂರಿನಲ್ಲಿ 2.19 ಕೋಟಿ ಹಣ ಇಡಿ ವಶಕ್ಕೆ ಪಡೆದಿದೆ. ನಿನ್ನೆ ಕಲಬುರ್ಗಿಯಲ್ಲಿ 1 ಕೋಟಿ ವಶಕ್ಕೆ ಪಡೆಯಲಾಗಿದೆ. ಅಕ್ರಮದಲ್ಲಿ ಭಾಗಿಯಾದವರು ಎಷ್ಟೇ ಪ್ರಭಾವಿಗಳಾಗಿರಲಿ ಅವರ ವಿರುದ್ಧ ಮುಲಾಜಿಲ್ಲದೇ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ಬೆಳಗಾವಿ: ಮಳೆಯಿಂದ ಅನುಕೂಲವೂ ಆಗಿದೆ ಅನಾನುಕೂಲವೂ ಆಗಿದೆ ಎಂದ ಕಾರಜೋಳ