*ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೂ ಮುನ್ನವೇ ಅಸಮಾಧಾನ ಸ್ಫೊಟ; ಸಭೆ ಬಹಿಷ್ಕರಿಸಿ ಹೊರ ನಡೆದ ಶಾಸಕರು*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೂ ಮುನ್ನವೇ ಶಾಸಕರ ಅಸಮಾಧಾನ ಸ್ಫೋಟಗೊಂಡಿದೆ.
ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಬೆಂಗಳೂರಿನ ಐಟಿಸಿ ಹೋಟೆಲ್ ನಲ್ಲಿ ಬಿಜೆಪಿ ಹೈಕಮಾಂಡ್ ವೀಕ್ಷಕರ ಸಭೆ ನಡೆದಿದ್ದು, ಸಭೆಯಲ್ಲಿನ ನಾಯಕರ ನಿರ್ಧಾರಕ್ಕೆ ಬಿಜೆಪಿ ಕೆಲ ಶಾಸಕರು ಸಿಟ್ಟಾಗಿದ್ದಾರೆ ಎನ್ನಲಾಗುತ್ತಿದೆ.
ವೀಕ್ಷಕರ ಸಭೆ ಬಳಿಕ ಸಂಜೆ 6 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿತ್ತು. ಆದರೆ ಶಾಸಕಾಂಗ ಪಕ್ಷದ ಸಭೆಗೂ ಮುನ್ನವೇ ಐಟಿಸಿ ಹೋಟೆಲ್ ನಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಹೊರನಡೆದಿದ್ದಾರೆ.
ಈ ವೇಳೆ ಮಾತನಾಡಿದ ಶಾಸಕ ಯತ್ನಾಳ್, ‘ಟೀ ಕುಡಿಯಲು ಹೊರ ಹೋಗುತ್ತಿದ್ದೇನೆ. ಇದು ಬಡವರು ಚಹಾ ಕುಡಿಯುವ ಜಾಗವಲ್ಲ’ ಎಂದು ಹೇಳಿ ತಮ್ಮ ಕಾರು ಹತ್ತಿ ತೆರಳಿದರು. ಯತ್ನಾಳ್ ಜೊತೆಗೆ ಶಾಸಕ ರಮೇಶ್ ಜಾರಕಿಹೊಳಿ ಕೂಡ ತೆರಳಿದ್ದಾರೆ.
ಒಟ್ಟಾರೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಬಹಿಷ್ಕರಿಸಿ ಯತ್ನಾಳ್ ಹಾಗೂ ಕೆಲ ಶಾಸಕರು ಹೊರ ನಡೆದಿರುವುದು ಅಚ್ಚರಿಗೆ ಕಾರಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ