*ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ವಾಪಾಸ್; ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಶಾಸಕ ಯತ್ನಾಳ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಆದೇಶ ವಾಪಾಸ್ ಪಡೆದುಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿರುವ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ ಸಂಬಂಧ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಈ ಹಿಂದೆ ಬಿಜೆಪಿ ಸರ್ಕಾರ ಆದೇಶ ನೀಡಿತ್ತು. ಈ ಆದೆಶವನ್ನು ವಾಪಾಸ್ ಪಡೆಯಲು ಇತ್ತೀಚೆಗೆ ನಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಸಚಿವ ಸಂಪುಟದ ನಿರ್ಧಾರ ಪ್ರಶ್ನಿಸಿ ಶಾಸಕ ಯತ್ನಾಳ್ ಹೈಕೋರ್ಟ್ ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.
ಸಿಬಿಐ ತನಿಖೆ ಮೊಟಕುಗೊಳಿಸುವ ಉದ್ದೇಶದಿಂದ ಸರ್ಕಾರ ಈ ನಿರ್ಧಾರ ಮಾಡಿದ್ದು, ಇದು ನ್ಯಾಯಾಂಗದ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪದ ಯತ್ನವಾಗಿದೆ. ಸರ್ಕಾರದ ಕ್ರಮಕ್ಕೆ ಸೀಮಿತವಾಗಿ ತಮ್ಮ ವಾದ ಆಲಿಸುವಂತೆ ಯತ್ನಾಳ್ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ