
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಬಣ ರಾಜಕೀಯ, ಪರಸ್ಪರ ವಾಕ್ಸಮರ ತಾರಕ್ಕೇರಿರುವ ನಡುವೆಯೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್, ಯತ್ನಾಳ್ ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ರಾಜ್ಯ ಮಟ್ಟದ ಪಕ್ಷದ ನಾಯಕತ್ವದ ವಿರುದ್ಧ ನಿಮ್ಮ ನಿರಂತರ ವಾಗ್ದಾಳಿ ಹಾಗೂ ಪಕ್ಷದ ನಿರ್ದೇಶನಗಳನ್ನು ಧಿಕ್ಕರಿಸುತ್ತಿರುವ ಬಗ್ಗೆ ವಿವಿಧ ವೇದಿಕೆಗಳಲ್ಲಿ ವರದಿಯಾಗಿದೆ. ಈ ಹಿಂದೆಯೂ ನಿಮಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು. ನಿಮ್ಮ ಹಿರಿತನ ಹಾಗೂ ನೀವು ಸಲ್ಲಿಸಿದ ವಿವರಣೆಗಳನ್ನು ಪರಿಗಣಿಸಿ ಕೇಂದ್ರ ಶಿಸ್ತು ಸಮಿತಿ ಮೃಧುವಾದ ದೃಷ್ಟಿಕೋನ ತೆಗೆದುಕೊಂಡಿತ್ತು. ಆದಗ್ಯೂ ನೀವು ಮತ್ತೆ ಪಕ್ಷದ ನಿಯಮ ಉಲ್ಲಂಘನೆ ಮಾಡುತ್ತಿದ್ದೀರಿ.
ನಿಮ್ಮ ವಿರುದ್ಧ ಯಾಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂಬುದನ್ನು ತಿಳಿಸಿ. 10 ದಿನಗಳಲ್ಲಿ ಉತ್ತರ ನೀಡುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ.
ಈ ನೋಟೀಸ್ ಗೆ ಉತ್ತರ ನೀಡುವುದಾಗಿ ಯತ್ನಾಳ ಟ್ವೀಟ್ ಮಾಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ