*ಗ್ರಾಮದೇವಿ ಜಾತ್ರೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: 18 ವರ್ಷದ ಬಳಿಕ ನಡೆಯುತ್ತಿರುವ ಬೆಳಗಾವಿ ತಾಲೂಕಿನ ಬಸರಿಕಟ್ಟಿಯ ಗ್ರಾಮದೇವತೆ ಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪಾಲ್ಗೊಂಡು ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.
ಜಾತ್ರೆಯ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿಸಿಕೊಟ್ಟಿರುವ ಸಚಿವರು, ಜಾತ್ರೆ ಸುಗಮವಾಗಿ ನೆರವೇರುವಂತಾಗಲು ತಮ್ಮ ಸಹಾಯಕರ ಮೂಲಕ ಸಕಲ ವ್ಯವಸ್ಥೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಜಾತ್ರೆಯ ಹಿನ್ನೆಲೆಯಲ್ಲಿ ಗ್ರಾಮ ಸಂಪೂರ್ಣ ಭಂಡಾರಮಯವಾಗಿದೆ. ಭಕ್ತರು ತಂಡೋಪತಂಡವಾಗಿ ಆಗಮಿಸಿ, ದೇವಿಯ ದರ್ಶನ ಪಡೆದು, ಹರಕೆಯನ್ನು ತೀರಿಸುತ್ತಿದ್ದಾರೆ.
ಈ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಗ್ರಾಮದ ಮುಖಂಡರು, ಜಾತ್ರಾ ಕಮೀಟಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ