Kannada NewsKarnataka NewsLatest

*ಹೈಕೋರ್ಟ್ ಮೆಟ್ಟಿಲೇರಿದ ರವಿ ಹಂಜ್*

ಪ್ರಗತಿವಾಹಿನಿ ಸುದ್ದಿ: ಬಸವ ಮಂಟಪ ಕೃತಿಯಲ್ಲಿ ಬಸವಣ್ಣನವರಿಗೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೇಖಕ ರವಿ ಹಂಜ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಲೇಖಕ ರವಿ ಹಂಜ್ ಅವರು ಕರ್ನಾಟಕ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ತಮ್ಮ ಅರ್ಜಿಯಲ್ಲಿ ಹಲವು ಮಹತ್ವದ ಅಂಶಗಳನ್ನು ಉಲ್ಲೇಖಿಸಿರುವ ರವಿ ಹಂಜ್ ನಾನು ಕಟ್ಟಾ ವೀರಶೈವ ಲಿಂಗಾಯತನಾಗಿದ್ದು, ಬಸವಣ್ಣನವರ ಅನುಯಾಯಿಯಾಗಿದ್ದೇನೆ. ಬ್ರಿಟಿಷ್ ಇತಿಹಾಸಕಾರ ಬಿ.ಎಲ್. ರೈಸ್ ಅವರ ಮೈಸೂರು ಗೆಜೆಟೀಯರ್ (Mysore Gazetteer) ಆಧರಿಸಿ ನಾನು ಆ ಲೇಖನವನ್ನು ಬರೆದಿದ್ದೇನೆ. ಆದರೆ, ಕಾನೂನನ್ನು ದುರುಪಯೋಗಪಡಿಸಿಕೊಂಡು ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ದೂರಿದ್ದಾರೆ.

ಪ್ರಕರಣದಲ್ಲಿ ಪೊಲೀಸರಿಂದ ನ್ಯಾಯಸಮ್ಮತ ತನಿಖೆ ನಡೆಯುವ ಭರವಸೆ ಇಲ್ಲ ಎಂದು ಅರ್ಜಿಯಲ್ಲಿ ಆತಂಕ ವ್ಯಕ್ತಪಡಿಸಿರುವ ಅವರು, “ಮುಖ್ಯಮಂತ್ರಿಗಳು ಹಾಗೂ ಸಚಿವರು ಈ ವಿಚಾರವಾಗಿ ನೀಡಿರುವ ಹೇಳಿಕೆಗಳಿಂದಾಗಿ ಪೊಲೀಸ್ ಇಲಾಖೆಯ ಮೇಲೆ ತೀವ್ರ ಒತ್ತಡವಿದೆ. ಹೀಗಾಗಿ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

ಬಸವ ಸಮಿತಿಯ ಅಧ್ಯಕ್ಷ ಅರವಿಂದ ಜತ್ತಿ ಅವರ ವಿರುದ್ಧವೂ ಅರ್ಜಿಯಲ್ಲಿ ಗಂಭೀರ ಆರೋಪ ಮಾಡಲಾಗಿದೆ. “ಈ ಹಿಂದೆ ನಾನು ಬಸವ ಸಮಿತಿಯಲ್ಲಿ ನಡೆದ ಅಕ್ರಮಗಳ ವಿರುದ್ಧ ಲೇಖನ ಬರೆದಿದ್ದೆ. ಆ ವೈಯಕ್ತಿಕ ದ್ವೇಷವನ್ನು ಇಟ್ಟುಕೊಂಡು ಅರವಿಂದ ಜತ್ತಿ ಅವರು ನನ್ನ ವಿರುದ್ಧ ದೂರು ನೀಡಿದ್ದಾರೆ. ನನ್ನ ಬರಹದಲ್ಲಿ ಯಾವುದೇ ಅಪರಾಧದ ಅಂಶಗಳಿಲ್ಲದಿರುವುದರಿಂದ, ನನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸಬೇಕು ಎಂದು ರವಿ ಹಂಜಗಿಮಠ್ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

Related Articles

Back to top button