Belagavi NewsBelgaum News

*ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ*

ಪ್ರಗತಿವಾಹಿನಿ ಸುದ್ದಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಆಸ್ಪತ್ರೆಗೆ ಯಾರೂ ಬಂದು ಅವರಿಗೆ ತೊಂದರೆ ಕೊಡಬೇಡಿ ಎಂದು ವೈದ್ಯರು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿಯವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮನೆಗೆ ಭೇಟಿ ನೀಡಿ, ಅವರ ಸಹೋದರನಿಂದ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು ವಿಚಾರಿಸಿದರು.

Home add -Advt

ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಭೇಟಿ ನೀಡಿದ ಸ್ವಾಮೀಜಿಗಳು, ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರಿಂದ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ಅವರ ಆರೋಗ್ಯದ ಕುರಿತು ಮಾಹಿತಿ ಪಡೆದರು.

Related Articles

Back to top button