
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಸವಕಲ್ಯಾಣ ಕಾಂಗ್ರೆಸ್ ಶಾಸಕ ನಾರಾಯಣರಾವ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.
ಕೊರೊನಾ ಸೋಂಕು ಹಿನ್ನಲೆಯಲ್ಲಿ ಶಾಸಕ ನಾರಾಯಣರಾವ್ ಕೆಲ ದಿನಗಳಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತಿದ್ದರು. ಆದರೆ ಎರಡು ದಿನಗಳಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇದೀಗ ಅವರು ಕೊನೆಯುಸಿರೆಳೆದಿದ್ದಾರೆ.
ಶಾಸಕ ನಾರಾಯಣ ರಾವ್ ಅವರಿಗೆ ಅಧಿಕ ರಕ್ತದೊತ್ತಡ, ಮಧುಮೇಹ ಹಾಗೂ ನ್ಯುಮೋನಿಯಾ ಸಮಸ್ಯೆ ಕೂಡ ಇತ್ತು ಎಂದು ತಿಳಿದುಬಂದಿದೆ.