Belagavi NewsBelgaum NewsKannada NewsKarnataka NewsLatest

*ಬಸವನ ಕುಡಚಿಯ ಸಾಯಿ ಕಾಲೋನಿಯಲ್ಲಿ ಶ್ರೀ ಶಿರಡಿ ಸಾಯಿಬಾಬಾ ಮಂದಿರ ಲೋಕಾರ್ಪಣೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಬಸವನ ಕುಡಚಿಯ ಸಾಯಿ ಕಾಲೋನಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಶಿರಡಿ ಸಾಯಿಬಾಬಾ ಮಂದಿರದ ಲೋಕಾರ್ಪಣೆ, ವಿಗ್ರಹ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಸಮಾರಂಭವು ಭಕ್ತಿ ಹಾಗೂ ಧಾರ್ಮಿಕ ಸಂಭ್ರಮದ ವಾತಾವರಣದಲ್ಲಿ ಅದ್ದೂರಿಯಾಗಿ ನೆರವೇರಿತು.

ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿ, ದೇವಸ್ಥಾನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಧಾರ್ಮಿಕ ಕೇಂದ್ರಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ಹೇಳಿದರು.

Home add -Advt

ಶಿರಡಿ ಸಾಯಿಬಾಬಾ ಅವರು ಮಾನವಕುಲಕ್ಕೆ ಅಮೂಲ್ಯ ಸಂದೇಶವನ್ನು ನೀಡಿದ್ದು, ಅವರ ಆದರ್ಶಗಳು ಇಂದಿನ ಸಮಾಜಕ್ಕೂ ದಾರಿದೀಪವಾಗಿವೆ. ಇಂತಹ ಮಂದಿರಗಳು ಕೇವಲ ಪೂಜಾ ಸ್ಥಳಗಳಾಗದೇ, ಸಮಾಜವನ್ನು ಒಗ್ಗೂಡಿಸುವ ಆಧ್ಯಾತ್ಮಿಕ ಕೇಂದ್ರಗಳಾಗಬೇಕು ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ದೇವಸ್ಥಾನದ ಸಂಸ್ಥಾಪಕರು ಹಾಗೂ ನವಜೀವನ್ ಫೌಂಡೇಷನ್‌ನ ಮುಖ್ಯಸ್ಥರಾದ ಡಾ. ಸತೀಶ್ ಆರ್. ಚೌಲಿಗೇರ್ ಅವರನ್ನು ಅಭಿನಂದಿಸಿದ ಚನ್ನರಾಜ ಹಟ್ಟಿಹೊಳಿ, ಸಮಾಜಮುಖಿ ಕಾರ್ಯಗಳೊಂದಿಗೆ ಧಾರ್ಮಿಕ ಸೇವೆಯನ್ನೂ ಕೈಗೊಂಡಿರುವುದು ಶ್ಲಾಘನೀಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿಶೇಷ ಪೂಜೆ, ಹೋಮ-ಹವನ, ವಿಗ್ರಹ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ವಿಧಿವಿಧಾನಗಳು ಭಕ್ತಿಭಾವದಿಂದ ನೆರವೇರಿದವು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಾಯಿಬಾಬಾರ ಆಶೀರ್ವಾದ ಪಡೆದರು.


ಈ ಸಂದರ್ಭದಲ್ಲಿ ಗುರು-ಹಿರಿಯರು, ಸ್ಥಳೀಯ ನಿವಾಸಿಗಳು, ಮಾಜಿ ಸೈನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related Articles

Back to top button