
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವೆಡೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಭಾಗಶ: ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಒಟ್ಟಾರೆ ರಾಜ್ಯದ ಹಲವೆಡೆ ಏಪ್ರಿಲ್ 5ವರೆಗೆ ಮಳೆಯಾಗಲಿದೆ ಎಂದು ತಿಳಿಸಿದೆ.