Kannada NewsKarnataka NewsPolitics

*ರೈಲ್ವೆ ವತಿಯಿಂದ ಸ್ವಚ್ಛತೆ ಹಿ ಸೇವಾ ಕಾರ್ಯಕ್ರಮ ಆಯೋಜನೆ*

ಪ್ರಗತಿವಾಹಿನಿ ಸುದ್ದಿ: ನೈಋತ್ಯ ರೈಲ್ವೆಯ ಎಸ್‌ಎಸ್‌ಎಸ್ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಇಂದು ಸ್ವಚ್ಛತೆ ಹಿ ಸೇವಾ – 2025 ಕಾರ್ಯಕ್ರಮವನ್ನು ಆಯೋಜಿಸಿತು. ಈ ಕಾರ್ಯಕ್ರಮಕ್ಕೆ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಹ್ಲಾದ ಜೋಶಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ, ಸ್ವಚ್ಛತೆ ಕುರಿತು ಜಾಗೃತಿ ಪ್ರತಿಜ್ಞೆಯನ್ನು ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಹಾಗೂ ಭಾಗವಹಿಸಿದವರಿಗೆ ಬೋಧಿಸಿದರು. ಸ್ವಚ್ಛತೆ ಮತ್ತು ಸಾರ್ವಜನಿಕ ಜವಾಬ್ದಾರಿಯ ಮಹತ್ವವನ್ನು ಅವರು ಒತ್ತಿ ಹೇಳಿದರು.

ನಂತರ ಪರಿಸರ ಸಂರಕ್ಷಣೆಯನ್ನು ಉತ್ತೇಜಿಸಲು ಮರ ನೆಡುವ ಕಾರ್ಯಕ್ರಮವನ್ನು ನಡೆಸಲಾಯಿತು. ಗಣ್ಯರು ಮತ್ತು ಸ್ವಯಂಸೇವಕರು ಹಲವಾರು ಮರಗಳನ್ನು ನೆಟ್ಟು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಅಲ್ಲದೆ ನಿಲ್ದಾಣದ ವ್ಯಾಪ್ತಿಯಲ್ಲಿಯೂ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಗಿದ್ದು, ರೈಲ್ವೆ ಸಿಬ್ಬಂದಿ ಮತ್ತು ಸ್ಥಳೀಯ ಅಧಿಕಾರಿಗಳು ಒಗ್ಗೂಡಿ ಸ್ವಚ್ಛತೆ ಮತ್ತು ಹಸಿರು ಪರಿಸರವನ್ನು ಕಾಯ್ದುಕೊಳ್ಳುವ ಪ್ರಯತ್ನದಲ್ಲಿ ತೊಡಗಿದರು. ಈ ಕಾರ್ಯಕ್ರಮಕ್ಕೆ ಉತ್ಸಾಹಭರಿತ ಪ್ರತಿಕ್ರಿಯೆ ದೊರೆಯಿತು ಹಾಗೂ ಸ್ಥಿರ ಜೀವನಶೈಲಿ ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಹರಡಿತು. ಶಾಸಕ ಮಹೇಶ್ ಟೆಂಗಿಕಾಯಿ, ಮಹಾಪ್ರಬಂಧಕ ಮುಕುಲ್ ಸರನ್ ಮಥೂರು, ಡಿಆರ್‌ಎಂ ಹುಬ್ಬಳ್ಳಿ ಬೆಲಾ ಮೀನಾ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದರು.

Home add -Advt

ನಂತರ ಸ್ವಸ್ಥ ನಾರಿ ಶಕ್ತ ಕುಟುಂಬ ಅಭಿಯಾನವನ್ನು ಹುಬ್ಬಳ್ಳಿಯ ಅಧಿಕಾರಿಗಳ ಕ್ಲಬ್‌ನಲ್ಲಿ ನಡೆಸಲಾಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರೇರಣೆಯಿಂದ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾರ್ಗದರ್ಶನದಡಿಯಲ್ಲಿ ಈ ಅಭಿಯಾನವನ್ನು ನಡೆಸಲಾಗಿದ್ದು, ಮಹಿಳೆಯರ ಆರೋಗ್ಯ ಮತ್ತು ಮಕ್ಕಳ ಸುಸ್ಥಿತಿಯ ಕುರಿತು ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿತ್ತು. ಸೆಂಟ್ರಲ್ ಆಸ್ಪತ್ರೆ ಹುಬ್ಬಳ್ಳಿ, ಎಚ್‌ಸಿಜಿ ಕ್ಯಾನ್ಸರ್ ಸೆಂಟರ್ ಹಾಗೂ ರಾಷ್ಟ್ರೋತ್ತಾನ ರಕ್ತ ಕೇಂದ್ರದ ಸಹಯೋಗದೊಂದಿಗೆ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಗಿದ್ದು, ಮಧುಮೇಹ, ರಕ್ತದೊತ್ತಡದ ಪರೀಕ್ಷೆ, ಬಾಯಿ, ಸ್ತನ ಹಾಗೂ ಗರ್ಭಾಶಯದ ಕ್ಯಾನ್ಸರ್ ಪರೀಕ್ಷೆ, ಕಣ್ಣಿನ ಪರೀಕ್ಷೆ, ಮಾನಸಿಕ ಆರೋಗ್ಯ ಸಮಾಲೋಚನೆ ಮತ್ತು ರಕ್ತದಾನ ಶಿಬಿರ ಸೇರಿದಂತೆ ವಿವಿಧ ಸೇವೆಗಳನ್ನು ನೀಡಲಾಯಿತು. ಹಲವಾರು ಉದ್ಯೋಗಿಗಳು ಹಾಗೂ ಅವರ ಕುಟುಂಬದವರು ಭಾಗವಹಿಸಿ ಈ ಸೇವೆಗಳ ಲಾಭ ಪಡೆದರು.

ನಂತರ ಅಂತ್ಯದಲ್ಲಿ ಮಹಾಪ್ರಬಂಧಕರಾದ ಮುಕುಲ್ ಸರನ್ ಮಾಥುರ್  ಅವರು ರೈಲ್ ಸೌದದಲ್ಲಿ ಸ್ವಚ್ಛತೆ ಪ್ರತಿಜ್ಞೆಯನ್ನು ನೀಡಿ, ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ವಚ್ಛತೆ ಹಾಗೂ ಪರಿಸರವನ್ನು ಕಾಪಾಡುವ ಸಮೂಹದ ಜವಾಬ್ದಾರಿಯನ್ನು ಕೈಗೊಳ್ಳುವಂತೆ ಪ್ರೇರೇಪಿಸಿದರು.

Related Articles

Back to top button