ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ನಿಯಮಗಳನ್ನು ಜನರು ಸಮರ್ಪಕವಾಗಿ ಪಾಲಿಸುತ್ತಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಹೀಗಾಗಿ ಲಾಕ್ ಡೌನ್ ನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಲು ಪೊಲೀಸರು ಕೈಗೊಂಡಿರುವ ಕ್ರಮಗಳನ್ನು ಮತ್ತಷ್ಟು ಬಿಗಿ ಗೊಳಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ಎಚ್ಚರಿಕೆ ನೀಡಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಅನವಶ್ಯಕವಾಗಿ ಮನೆಯಿಂದ ಹೊರಗಡೆ ಬರುತ್ತಿದ್ದಾರೆ. ಯಾದಗಿರಿಯಲ್ಲಿ ಮದುವೆಗೆ ಮೋಟಾರ್ಸೈಕಲ್ ನಲ್ಲಿ ಐದು ಜನ ತೆರಳುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ವಾಹನಗಳನ್ನು ಸೀಜ್ ಮಾಡುವ ಕಾರ್ಯಾಚರಣೆಯನ್ನು ಮತ್ತಷ್ಟು ಕಠಿಣವಾಗಿ ಜಾರಿಗೊಳಿಸಲಾಗುವುದು. ಈಗ ಜಾರಿಯಲ್ಲಿರುವ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸುವ ಮೂಲಕ ಲಾಕ್ ಡೌನ್ ಯಶಸ್ವಿಗೊಳಿಸಲಾಗುವುದು ಎಂದು ತಿಳಿಸಿದರು.
ಗ್ರಾಮಾಂತರ ಪ್ರದೇಶಗಳಲ್ಲಿ ಜಿಲ್ಲಾಧಿಕಾರಿಗಳು ಮೂರ್ನಾಲ್ಕು ದಿನಗಳ ಕಾಲ ನಿರಂತರವಾಗಿ ಲಾಕ್ ಡೌನ್ ಜಾರಿ ಮಾಡಿದ್ದಾರೆ. ಆದರೂ ಕೂಡ ಜನ ಗಂಭೀರತೆಯನ್ನು ಅರಿತು ಕೊಳ್ಳುತ್ತಿಲ್ಲ. ಲಾಕ್ ಡೌನ್ ಗೆ ಸಹಕಾರ ನೀಡುತ್ತಿಲ್ಲ. ಲಾಕ್ ಡೌನ್ ಯಾಕೆ ಜಾರಿಯಾಗಿದೆ ಎಂಬುದನ್ನ ಅರ್ಥಮಾಡಿಕೊಳ್ಳದಿದ್ದರೆ ಕೋವಿಡ್ ನಿಯಂತ್ರಣ ಸಾಧ್ಯವಿಲ್ಲ ಎಂದರು.
ರಾಜ್ಯದಲ್ಲಿ ಸಂದಿಗ್ಧದ ಆರ್ಥಿಕ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ಬಡಜನರಿಗಾಗಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿ ಜನರಿಗೆ ಯಾವ ರೀತಿ ಸಹಾಯ ಮಾಡಬೇಕೆಂಬುದರ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದರು.
ತಾಂಡಾದ ಮಕ್ಕಳಲ್ಲಿ ಹರಡಿದ ಕೊರೊನಾ; ಹೆಚ್ಚಿದ ಆತಂಕ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ