Latest

*ಸಂಸದ ಬಸವರಾಜ್ ಬೊಮ್ಮಾಯಿ ಸೇರಿ ಮೂವರಿಗೆ ಗೌರವ ಡಾಕ್ಟರೇಟ್*

ಪ್ರಗತಿವಾಹಿನಿ ಸುದ್ದಿ: ಸಂಸದ ಬಸವರಾಜ್ ಬೊಮ್ಮಾಯಿ ಸೇರಿದಂತೆ ಮೂವರು ಗಣ್ಯರಿಗೆ ಹಾವೇರಿ ವಿಶ್ವವಿದ್ಯಾಲಯ ಮೊದಲ ಘಟಿಕೋತ್ಸವ ಹಿನ್ನೆಲೆಯಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದೆ.

ವಿಶೇಷ ಸಿಂಡಿಕೇಟ್ ಸಭೆ ನಡೆಸಿ ಸಾಧಕರನ್ನು ಗೌರವ ಡಾಕ್ಟರೇಟ್ ಗೆ ಆಯ್ಕೆ ಮಾಡಲಾಗಿದೆ ಎಂದು ಹಾವೇರಿ ವಿವಿ ಕುಲಪತಿ ಪ್ರೊ.ಸುರೇಶ್ ಜಂಗಮಶೆಟ್ಟಿ ತಿಳಿಸಿದ್ದಾರೆ.

ಸಾಮಾಜಿಕ ಸೇವೆ ಪರಿಗಣಿಸಿ ಹಾವೇರಿ-ಗದಗ ಸಂಸದ ಬಸವರಾಜ್ ಬೊಮ್ಮಾಯಿ, ಶೈಕ್ಷಣಿಕ ಸೇವೆ ಪರಿಗಣಿಸಿ ಹಾವೇರಿಯ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ ಹಾಗೂ ಸಾಹಿತ್ಯ ಸೇವೆ ಪರಿಗಣಿಸಿ ಕವಿ ಸತೀಶ್ ಕುಲಕರ್ಣಿ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು.

ಏಪ್ರಿಲ್ 6ರಂದು ಹಾವೇರಿಯ ಜಿ.ಎಸ್.ಕಾಲೇಜು ಸಭಾಭವನದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ರಾಜ್ಯಪಾಲರು, ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button