Latest

*ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಭೇಟಿ ಬಗ್ಗೆ ಮಾಜಿ ಸಿಎಂ ಬೊಮ್ಮಾಯಿ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣದ ಚರ್ಚೆ ಬಿಜೆಪಿ ನಾಯಕರೇ ಆರೋಪಿಸುತ್ತಿರುವಾಗೇ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಭೇಟಿಯಾಗಿದ್ದು ಭಾರಿ ಸುದ್ದಿಯಾಗಿತ್ತು.ಇದೀಗ ಈ ಬಗ್ಗೆ ಸ್ವತ: ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮೂಲಕ ವಿವರಿಸಿರುವ ಬೊಮ್ಮಾಯಿ, ಶಾಮನೂರು ಶಿವಶಂಕರಪ್ಪ ಹಿರಿಯರು, ದೂರದ ಸಂಬಂಧಿಯೂ ಹೌದು. ಈ ಹಿಂದೆಯೂ ಹಲವು ಬಾರಿ ನಮ್ಮ ಮನೆಯಲ್ಲಿ ಭೇಟಿಯಾಗಿದ್ದೇವೆ. ಇದರಲ್ಲಿ ರಾಜಕಾರಣ ಬೆರೆಸುವುದು ಸೂಕ್ತವಲ್ಲ ಎಂದು ತಿಳಿಸಿದ್ದಾರೆ.

ನಾನು ಶಿಗ್ಗಾಂವಿಯಿಂದ ಬೆಂಗಳೂರಿಗೆ ಬರುವಾಗ ರಾತ್ರಿ ಊಟ ಮಾಡಲು ಹೋಟೆಲ್ ಗೆ ಹೋಗಿದ್ದೆ. ಹೋದಾಗ ಶಾಮನೂರು ಅವರ ಮೊಮ್ಮಕ್ಕಳ ಹೊಸ ಸಂಬಂಧ ಬಗ್ಗೆ ಚರ್ಚಿಸಲು ಸೇರಿದ್ದರು. ಈ ಸಂದರ್ಭದಲ್ಲಿ ಅವರ ಜೊತೆ 10 ನಿಮಿಷ ಉಭಯ ಕುಶಲೋಪರಿಯ ಮಾತುಕತೆಯಾಗಿದೆ. ಹೊರತು ಯಾವುದೇ ರಾಜಕೀಯ ಪ್ರಸ್ತಾಪವಾಗಿಲ್ಲ.

ಸ್ನೇಹ ಸಂಬಂಧವೇ ಬೇರೆ. ರಾಜಕೀಯ ಸಂಬಂಧವೇ ಬೇರೆ. ನಾನು ನನ್ನ ರಾಜಕೀಯ ನಿಲುವಿನಲ್ಲಿ ರಾಜೀ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

Home add -Advt

Related Articles

Back to top button