
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕ್ರಿಸಿದ ಬಳಿಕ ಮೊದಲ ಬಾರಿ ಬಸವರಾಜ್ ಬೊಮ್ಮಾಯಿ ದೆಹಲಿಗೆ ತೆರಳಿದ್ದು, ಇಂದು ಸಂಜೆ 4 ಗಂಟೆಗೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಕೇರಳ, ಕರ್ನಾಟಕ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವ ಅಗತ್ಯವಿದೆ. ಗಡಿ ಭಾಗದಲ್ಲಿ ಬಿಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಿಂದ ವಾಪಸಾದ ಬಳಿಕ ಅಧಿಕಾರಿಗಳ ಸಭೆ ನಡೆಸಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ