Latest

GST ಯಶಸ್ಸಿಗೆ ತೆರಿಗೆ ಸಲಹೆಗಾರರ ಕೊಡುಗೆ ಅಪಾರ

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಸರಕು ಮತ್ತು ಸೇವಾ ತೆರಿಗೆ ( GST )ವ್ಯವಸ್ಥೆ ದೇಶದಲ್ಲಿ ಯಶಸ್ವಿಯಾಗಲು ತೆರಿಗೆ ಸಲಹೆಗಾರರ ಕೊಡುಗೆ ಅಪಾರವಾಗಿದೆ ಎಂದು ಜಿಎಸ್ ಟಿ ಮಂಡಳಿಯ ಕರ್ನಾಟಕದ ಪ್ರತಿನಿಧಿ, ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.

ಗುರುವಾರ ಕರ್ನಾಟಕ ರಾಜ್ಯ ತೆರಿಗೆ ಸಲಹೆಗಾರರ ಸಂಘ ಆಯೋಜಿಸಿದ್ದ ನಾಲ್ಕನೇ ವರ್ಷದ ಜಿಎಸ್ ಟಿ ದಿನದ ಅಂಗವಾಗಿ ಆಯೋಜಿಸಿದ್ದ ಸಮಾರಂಭವನ್ನು ಉದ್ಘಾಟಿಸಿ ವರ್ಚುವಲ್ ಮೂಲಕ ಅವರು ಮಾತನಾಡಿದರು.

ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆ ಬಗ್ಗೆ ಹತ್ತು ವರ್ಷಗಳ ಕಾಲ ಚರ್ಚೆಯಾಗಿದೆ. ಇಷ್ಟು ವರ್ಷಗಳ ಸುದೀರ್ಘ ಚರ್ಚೆಯ ನಂತರ ಜಿಎಸ್ ಟಿ ಜಾರಿಯಾಗಿದೆ. ಒಂದು ರಾಷ್ಟ್ರ ಒಂದು ತೆರಿಗೆ ಪರಿಕಲ್ಪನೆಯ ಜತೆ ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಹಲವಾರು ವೈರುಧ್ಯ ಮತ್ತು ವೈವಿಧ್ಯತೆ ರಾಜ್ಯಗಳನ್ನು ಒಗ್ಗೂಡಿಸಿಕೊಂಡು ಹೋಗೋದು ಬಹುದೊಡ್ಡ ಕೆಲಸ. ಈ ದೊಡ್ಡ ಕೆಲಸದ ಹಿಂದಿರುವ ಇಂಜಿನ್ ಎಂದರೆ ಪ್ರಧಾನಿ ನರೇಂದ್ರ ಮೋದಿ ಎಂದು ಅವರು ಬಣ್ಣಿಸಿದರು.

ದೇಶದಲ್ಲಿ ಜಿಎಸ್ ಟಿ ಜಾರಿಯಾದಾಗ ಹಳೇ ಪದ್ಧತಿಯಿಂದ ಹೊಸ ಪದ್ಧತಿಗೆ ತಮ್ಮನ್ನು ತಾವು ಪರಿವರ್ತನೆ ಗೊಳಿಸಿಕೊಂಡವರು ಎಂದರೆ ತೆರಿಗೆ ಸಲಹೆಗಾರರು. ಅವರು ಹೊಸ ತೆರಿಗೆ ಪದ್ಧತಿಯನ್ನು ಅನುಷ್ಠಾನಕ್ಕೆ ತಂದರುಮ. ಜನರಲ್ಲಿ ಗೊಂದಲ ಸೃಷ್ಟಿಯಾಗದಂತೆ ಮುತುವರ್ಜಿ ವಹಿಸಿದರು. ಈ ಕಾರಣದಿಂದಾಗಿ ದೇಶದಲ್ಲಿ ಇಂದು ಜಿಎಸ್ ಟಿ ತೆರಿಗೆ ವ್ಯವಸ್ಥೆ ನಾಲ್ಕು ವರ್ಷಗಳನ್ನು ಪೂರೈಸಿದೆ. ನಮ್ಮ ಮುಂದೆ ಮುಂದಿನ 40 ವರ್ಷಗಳಲ್ಲಿ ತೆರಿಗೆ ವ್ಯವಸ್ಥೆಯಲ್ಲಿ ಇನ್ನಷ್ಟು ಸರಳಿಕರಣ ಮಾಡಬೇಕಾದದ್ದು ಅಗತ್ಯವಾಗಿದೆ. ಒಟ್ಟಾರೆ ದೇಶಕಟ್ಟುವ ಕೆಲಸದಲ್ಲಿ ಹಾಗೂ ದೇಶದ ಅಭಿವೃದ್ಧಿಯಲ್ಲಿ ತೆರಿಗೆ ಸಲಹೆಗಾರರು ನಿರ್ವಹಿಸುವ ಪಾತ್ರ ಬಹುಮುಖ್ಯವಾಗಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಪ್ರತಿ ಗುರುವಾರ ಸಾರ್ವಜನಿಕರಿಗೆ ಸಚಿವರು ಲಭ್ಯ: ಡಿಸಿಎಂ ಸವದಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button