ಪ್ರಗತಿವಾಹಿನಿ ಸುದ್ದಿ; ಹಾವೇರಿ: ನಾಲ್ಕೈದು ತಿಂಗಳಲ್ಲಿ ರಾಜ್ಯ ರಾಜಕೀಯದ ಚಿತ್ರಣವೇ ಬದಲಾಗಲಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಬಸಾರಾಜ್ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರ ಹೋಗುವಂತಹ ದಾರಿ ನೋಡಿದರೆ ಇದು ಬಹಳ ದಿನ ನಡೆಯುವುದಿಲ್ಲ. ನಾಲ್ಕೈದು ತಿಂಗಳಲ್ಲಿ ರಾಜ್ಯ ರಾಜಕೀಯದ ಚಿತ್ರಣ ಬದಲಾಗಲಿದೆ ಎಂದು ಹೇಳಿದರು.
ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ನಾವು ಜಾರಿಗೆ ತಂದಿರುವ ಜನಪರ ಕಾನೂನು ರದ್ದುಪಡಿಸಲು ಹೊರಟಿದ್ದಾರೆ. ಬಿಜೆಪಿ ನಾಯಕರು, ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿದ್ದಾರೆ. ಕಾಂಗ್ರೆಸ್ ನವರಿಗೆ ನಮ್ಮ ಕಾರ್ಯಕರ್ತರು ತಲೆಬಾಗುವ ಪ್ರಶ್ನೆಯೇ ಇಲ್ಲ ಎಂದರು.’
ಎಲ್ಲೋ ಅಲ್ಪಸ್ವಲ್ಪ ವ್ಯತ್ಯಾಸವಾಗಿದ್ದಕ್ಕೆ ನಾವು ಸೋತಿರಬಹುದು. ಆದರೆ ಸ್ವಾಭಿಮಾನ ಕಳೆದುಕೊಂಡಿಲ್ಲ. ಮೋದಿಯವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದ್ದಾರೆ.
ಇನ್ನು ಎಲ್ಲೆಲ್ಲಿ ರಾಜಕಾರಣ ನಡೆಯುತ್ತದೆ. ಎಲ್ಲಿ ಏನ್ ನಡೆಯುತ್ತದೆ ಗೊತ್ತಿದೆ. ಯಾವ ವ್ಯಕ್ತಿಯನ್ನು ಎಲ್ಲಿ ಕಟ್ಟಿಹಾಕಬೇಕು ಎಂಬುದು ಚೆನ್ನಾಗಿ ಗೊತ್ತಿದೆ. ನನ್ನ ಜನರ ಕ್ಷೇಮ, ಶಿಗ್ಗಾಂವಿ ಕ್ಷೇತ್ರದ ಅಭಿವೃದ್ಧಿ ನನಗೆ ಮುಖ್ಯ. ಸರ್ಕಾರ ನಮ್ಮದು ಎಂದು ಅಭಿವೃದ್ದಿಗೆ ಅಡ್ಡಿ ಪಡಿಸಿದ್ರೆ ಸುಮ್ಮನಿರಲ್ಲ ಎಂದು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಯಾಸಿನ್ ಖಾನ್ ಪಠಾಣ್ ಗೆ ಪರೋಕ್ಷ ವಾರ್ನಿಂಗ್ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ