Kannada NewsKarnataka NewsLatestPolitics

*ಸಿಎಂ ಸುದೀರ್ಘ ಅವಧಿಯ ಅಧಿಕಾರದ ಕೊಡುಗೆಯಾಗಿ ಹಾವೇರಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಿಸಲಿ: ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ಸುದೀರ್ಘ ಅವಧಿಯ ಅಧಿಕಾರದ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರದ ದಾಖಲೆಯ ನೆನಪಿಗಾಗಿ ಹಾವೇರಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸತ್ರೆ ಕೊಡುಗೆ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಇಂದು ಹಾವೇರಿಯ ದೇವಗಿರಿ – ಯಲ್ಲಾಪುರ ಬಳಿ ನೂತನವಾಗಿ ನಿರ್ಮಿಸಲಾದ ಹಾವೇರಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ಮಾತನಾಡಿದರು. ನಮ್ಮೆಲ್ಲ ಬಹುದಿನಗಳ ವೈದ್ಯಕೀಯ ಕಾಲೇಜು ಉದ್ಘಾಟನೆ ಆಗಿದೆ. ವೈದ್ಯಕೀಯ ಶಿಕ್ಷಣದ ಜೊತೆಗೆ ಹಾವೇರಿಯ ಆರೋಗ್ಯದ ಸಮಸ್ಯೆಗೆ ಪರಿಹಾರ ನೀಡಲು ಮೆಡಿಕಲ್ ಕಾಲೇಜು ವತಿಯಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆಗಬೇಕು ಎನ್ನುವುದು ನಮ್ಮೆಲ್ಲರ ಬಯಕೆ ಎಂದು ಹೇಳಿದರು.

ಮೆಡಿಕಲ್ ಕಾಲೇಜು 2017 ರಲ್ಲಿ ಘೋಷಣೆ ಆದರೂ ಚುನಾವಣೆ ಸಂದರ್ಭ, ಮುಂದೆ ಬಂದ ಸರ್ಕಾರಗಳು ಇದಕ್ಕೆ ಮುತುವರ್ಜಿ ವಹಿಸಲಿಲ್ಲ. ಕೇಂದ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎಲ್ಲೆಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಇಲ್ಲ ಅಲ್ಲಿ ಮೆಡಿಕಲ್ ಕಾಲೇಜು ಮಾಡಬೇಕೆಂದು ಕಳೆದ 11 ವರ್ಷದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು 60/40 ಅನುಪಾತದಲ್ಲಿ ಕರ್ನಾಟಕದಲ್ಲಿ ಹಾವೇರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಸೇರಿ ನಾಲ್ಕು ಮೆಡಿಕಲ್ ಕಾಲೇಜು ಕೊಟ್ಟಿದ್ದಾರೆ. ಕೇಂದ್ರ ಸರ್ಕಾರ 194 ಕೋಟಿ ರೂ. ಕೊಟ್ಟಿದೆ. ಅಲ್ಲದೇ ಕ್ರಿಟಿಕಲ್ ಕೇರ್ ಸೆಂಟರ್ ಗೆ 50 ಕೋಟಿ ರೂ.ನೀಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನದಲ್ಲಿ ಕಟ್ಟಡ ಉದ್ಘಾಟನೆ ಆಗಿದೆ. 2023 ರಲ್ಲಿಯೇ ಕಾಲೇಜು ಆರಂಭವಾಗಿದೆ. ಈಗಾಗಲೇ ಮೂರು ವರ್ಷ ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡಿದ್ದಾರೆ. ನಮ್ಮ ಭಾಗದಲ್ಲಿ ಈ ಕೆಲಸ ಆಗಬೇಕಾದರೆ ನಾವೆಲ್ಲರೂ ಕೂಡ ಜನರ ಕೇಂದ್ರ ಬಿಂದುವಾಗಿ ನಮ್ಮ ಕೆಲಸ ಮಾಡಿದಾಗ ಸಾಧ್ಯ ಎನ್ನುವುದಕ್ಕೆ ಇದು ಸಾಕ್ಷಿ ಎಂದು ಹೇಳಿದರು.
ಮೆಡಿಕಲ್ ಕಾಲೇಜನ್ನು ಹಾವೇರಿ ಜಿಲ್ಲಾ ಆಸ್ಪತ್ರೆಗೆ ಜೋಡಿಸಿದ್ದೇವೆ. ಅದರ ವ್ಯವಸ್ಥೆ ಸರಿ ಇಲ್ಲ. ಒಂದು ಸೂಪರ್ ಸ್ಪೆಷಾಲಿಟಿ ಆಸತ್ರೆಯನ್ನು ಘೋಷಣೆ ಮಾಡಬೇಕು ಎಂದು ಕೇಳಿಕೊಳ್ಳುತ್ತೇನೆ. ಅದು ಬಹಳ ಅವಶ್ಯಕತೆ ಇದೆ. ನಮಗೆ ಏನಾದರೂ ತೊಂದರೆ ಆದರೆ ಹುಬ್ಬಳ್ಳಿ ಅಥವಾ ದಾವಣಗೆರೆಗೆ ಹೋಗಬೇಕಿದೆ. ಸಿಎಂ ಅತಿ ಹೆಚ್ಚು ದಿನ ಅಧಿಕಾರ ಮಾಡಿದ್ದಕ್ಕಾಗಿ ನಮಗೆಲ್ಲ ಬಹಳವಟು ಸಂತೋಷ ಆಗಿದೆ. ಇವತ್ತು ಅವರ ದಾಖಲೆಯ ದಿನ ಇದು ಚಿರಸ್ಮರಣೀಯ ಆಗಬೇಕು. ಸಿದ್ದರಾಮಯ್ಯ ದಾಖಲೆ ಮಾಡಿದ ದಿನ ನಮ್ಮ ಹಾವೇರಿಗೆ ಕೊಡುಗೆ ಕೊಟ್ಟಿದ್ದಾರೆ ಎಂದು ನೆನಪು ಉಳಿಯಲು ಸೂಪರ್ ಸಷಾಲಿಟಿ ಆಸತ್ರೆ ಘೋಷಣೆ ಮಾಡುವಂತೆ ಆಗಹಿಸಿದರು. ಸರ್ಕಾರದ ಉದ್ದೇಶ ಮುಖ್ಯಮಂತ್ರಿಗಳ ಬಾಯಲ್ಲಿ ಬಂದರೆ ಅದು ಆಗುತ್ತದೆ ಎನ್ನುವ ವಿಶ್ವಾಸ ಇದೆ. ಅಭಿವೃದ್ಧಿಯಲ್ಲಿ ರಾಜಕಾರಣ ಅವಶ್ಯಕತೆ ಇಲ್ಲ. ಪೈಪೋಟಿ ಇರಲಿ ನಮ್ಮ ಆಯ್ಕೆ ಪೀಪಲ್ ಓರಿಯಂಟಲ್ ಪೊಲಿಟಿಕ್ಸ್, ಸಿದ್ದರಾಮಯ್ಯ ಅವರ ದಾಖಲೆಯನ್ನು ಮುರಿದಿದ್ದಾರೆ. ದೇವರಾಜ ಅರಸು ಅವರ ದಾಖಲೆ ಇನ್ನೂ ನೆನಪಿದೆ. ಅದನ್ನು ಸಿಎಂ ಅವರಿಂದ ನಾವು ಬಯಸುತ್ತೇವೆ ಎಂದು ಹೇಳಿದರು.

ನಮ್ಮ ಉಪ ಮುಖ್ಯಮಂತಿಗಳು ಬೆಡ್ತಿ ವರದಾ ಯೋಜನೆಗೆ ಚಾಲನೆ ಕೊಟ್ಟಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇದರಿಂದ ಬರಗಾಲದ ಈ ಭಾಗದ ಜನರಿಗೆ ಅನುಕೂಲವಾಗುತ್ತದೆ. ವರದಾ ನದಿ ಮಳೆಗಾಲದಲ್ಲಿ ಮಾತ್ರ ಹರಿಯುತ್ತದೆ. ಬೆಡ್ತಿಯಿಂದ ಸಮುದ್ರಕ್ಕೆ ಹರಿದು ಹೋಗುವ ನೀರನ್ನು ಕೇವಲ ಶೇ 8 ರಿಂದ 10 ರಷ್ಟು ನೀರನ್ನು ತುಂಗಭದ್ರಾ ನದಿಗೆ ಜೋಡಿಸಿದರೆ ಗದಗ, ಹಾವೇರಿ ಜಿಲ್ಲೆಗೆ ಅನುಕೂಲವಾಗುತ್ತದೆ. ಇದು 1994 ರಿಂದ ಇರುವ ಯೋಜನೆ ಕೇಂದ್ರದ ಮೂರು ನದಿ ಜೋಡಣೆ ಯೋಜನೆಗಳಲ್ಲಿ ಇದು ಒಂದು. ಕೇಂದ್ರ ಸರ್ಕಾರ ಕೈಗೆತ್ತಿಕೊಳ್ಳುತ್ತಿದೆ. ರಾಜ್ಯ ಸರ್ಕಾರ ಡಿಪಿಆರ್ ಮಾಡಲು ಒಪ್ಪಿಕೊಂಡಿದೆ. ಪರಿಸರಕ್ಕೂ ತೊಂದರೆಯಾಗದಂತೆ ಯೋಜನೆ ರೂಪಿಸಲಾಗುತ್ತಿದೆ. ಯೋಜನೆ ಸಾಕಾರಗೊಂಡರೆ ಈ ಭಾಗದಲ್ಲಿ ಹಸಿರು ಕ್ರಾಂತಿಯಾಗುತ್ತದೆ. ಒಳ್ಳೆಯ ದಿನ ಶುಭಾರಂಭವಾಗಿದೆ. ಬರುವಂತಹ ದಿನಗಳಲ್ಲಿ ಹಾವೇರಿ ಇನ್ನಷ್ಟು ಅಭಿವೃದ್ಧಿ ಆಗಿ, ಉತ್ತರ ಕರ್ನಾಟಕದ ಹೆಬ್ಬಾಗಿಲು ಅತ್ಯಂತ ಸುಂದರವಾಗಿ ತಳಿರು ತೋರಣಗಳಿಂದ ಸ್ವಾಗತ ಮಾಡುವಂತೆ ಆಗಬೇಕು ಎಂದು ಹೇಳಿದರು.

Home add -Advt

ಈ ಸಂಧರ್ಭದಲ್ಲಿ ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ, ಸಚಿವರುಗಳಾದ ಶಿವಾನಂದ ಪಾಟೀಲ್, ಡಾ.ಶರಣಪ್ರಕಾಶ ಪಾಟೀಲ್, ಶ್ ಎಚ್.ಕೆ.ಪಾಟೀಲ್, ಸತೀಶ ಜಾರಕಿಹೊಳಿ, ವಿಧಾನಸಭೆಯ ಉಪಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಶಾಸಕರುಗಳಾದ ಬಸವರಾಜ ಶಿವಣ್ಣನವರ, ಯು.ಬಿ.ಬಣಕಾರ, ಶ್ರೀನಿವಾಸ ಮಾನೆ, ಪ್ರಕಾಶ ಕೋಳಿವಾಡ, ಯಾಸೀರಖಾನ್ ಪಠಾಣ್, ಹೆಸ್ಕಾಂ ಅಧ್ಯಕ್ಷರಾದ ಸೈಯದ ಅಜ್ಜಂಪೀರ ಖಾದ್ರಿ, ಹೀಮ್ಸ್ ನಿರ್ದೇಶಕರಾದ ಡಾ ಪ್ರದೀಪ ಕುಮಾರ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Related Articles

Back to top button