ಬೆಂಗಳೂರು: ಸಿಎಂ ವಿರುದ್ಧ ಸಚಿವ ಕೆ.ಎಸ್.ಈಶ್ವರಪ್ಪ ಹೈಕಮಾಂಡ್ ಗೆ ಹಾಗೂ ರಾಜ್ಯಪಾಲರಿಗೆ ಪತ್ರ ಬರೆದು ದೂರು ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಗ್ರಾಮೀಣಾಭಿವೃದ್ಧಿ ಇಲಾಖೆ ಅನುದಾನದ ವಿಚಾರದಲ್ಲಿ ಈಶ್ವರಪ್ಪನವರಿಗೆ ಸಮಸ್ಯೆ, ಅಸಮಾಧಾನಗಳಿದ್ದರೆ ಗಳಿದ್ದರೆ, ನೇರವಾಗಿ ಬಂದು ಸಿಎಂ ಯಡಿಯೂರಪ್ಪನವರ ಜೊತೆ ಚರ್ಚಿಸಿ ಎಂದು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬೊಮ್ಮಾಯಿ, ಕೊರೊನಾ ಲಾಕ್ ಡೌನ್ ನಿಂದಾಗಿ ಆರ್ಥಿಕ ಸಂಕಷ್ಟದಿಂದ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದವು. ಆರ್ಥಿಕತೆಯಲ್ಲಿ ಕೊಂಚ ಚೇತರಿಕೆ ಕಂಡುಬಂದ ಹಿನ್ನಲೆಯಲ್ಲಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗಾಗಿ ಶಾಸಕರು ಬಂದು ಅನುದಾನ ಬಿಡುಗಡೆ ಮಾಡುವಂತೆ ಸಿಎಂ ಯಡಿಯೂರಪ್ಪನವರಿಗೆ ಒತ್ತಾಯಿಸಿದ್ದರು. ಸಿಎಂ ಹಣಕಾಸು ಸಚಿವರೂ ಕೂಡ ಆಗಿರುವುದರಿಂದ ಎಲ್ಲಾ ಶಾಸಕರಿಗೆ ಅಗತ್ಯಕ್ಕೆ ಅನುಗುಣವಾಗಿ ಹಣ ಬಿಡುಗಡೆಗೆ ಆದೇಶ ನೀಡಿದ್ದಾರೆ ಆದರೆ ಹಣ ಇನ್ನೂ ಬಿಡುಗಡೆಯಾಗಿಲ್ಲ ಎಂದು ಶಾಸಕರು ಹೇಳುತ್ತಿದ್ದಾರೆ ಎಂದರು.
ಸಚಿವ ಈಶ್ವರಪ್ಪನವರಿಗೆ ಅವರ ಇಲಾಖೆಯಲ್ಲಿ ಆಕ್ಷೇಪಗಳಿದ್ದರೆ ಸಿಎಂ ಜೊತೆ ಬಂದು ಚರ್ಚಿಸಿ ಬಗೆಹರಿಸಿಕೊಳ್ಳಬೇಕು. ಅಸಮಾಧಾನದ ಮಾತುಗಳಿದ್ದರೆ ಅದನ್ನು ನಮ್ಮ ಸರ್ಕಾರದ ಒಳಗೇ ಬಗೆಹರಿಸಿಕೊಳ್ಳಬೇಕೇ ಹೊರತು ರಾಜ್ಯಪಾಲರ ಅಂಗಳದವರೆಗೆ ಹೋಗುವುದು ಸೂಕ್ತ ಅಲ್ಲ. ನಮ್ಮದು ಶಿಸ್ತಿನ ಪಕ್ಷ. ಆ ಶಿಸ್ತಿನ ಉಲ್ಲಂಘನೆ ಆಗಬಾರದು. ನಾವೆಲ್ಲ ಸಿಎಂ ಬಿಎಸ್ ವೈ ನೇತೃತ್ವದಲ್ಲಿ ಸರ್ಕಾರ ಮಾಡುತ್ತಿದ್ದೇವೆ ಎಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯಬೇಕು. ಸಿಎಂ ಆದೇಶ ನೀಡಿ ಒಂದು ತಿಂಗಳ ಮೇಲಾಗಿದೆ ಆದರೆ ಅನುದಾನ ಸಿಕ್ಕಿಲ್ಲ ಎಂದು ಶಾಸಕರು ಹೇಳುತ್ತಿದ್ದಾರೆ. ಶಾಸಕರಿಗೆ ಶೀಘ್ರ ಅನುದಾನ ಬಿಡುಗಡೆಯಾಗಬೇಕು. ಕ್ಷೆತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯಬೇಕು. ಆ ನಿಟ್ಟಿನಲ್ಲಿ ಈಶ್ವರಪ್ಪ ಸಹಕಾರ ನೀಡಬೇಕು ಸಮಸ್ಯೆಗಳಿದ್ದರೆ ಈಶ್ವರಪ್ಪ ಸಿಎಂ ಜೊತೆ ಚರ್ಚಿಸಿ ಬಗೆಹರಿಸಿಕೊಳ್ಳುವುದು ಸೂಕ್ತ ಎಂದು ಹೆಳಿದರು.
ಸಿಎಂ ಬಿಎಸ್ ವೈ ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿ; ರಾಜ್ಯಪಾಲರಿಗೆ ಸಿದ್ದರಾಮಯ್ಯ ಒತ್ತಾಯ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ