Latest

ಬೇರೆ ರಾಜ್ಯದಿಂದ ಕರ್ನಾಟಕ ಪ್ರವೇಶಿಸಬಹುದೆ? – ಬೊಮ್ಮಾಯಿ ಹೇಳಿಕೆ ಕೇಳಿ

ಪ್ರಗತಿವಾಹಿನಿ ಸುದ್ದಿ; ಶಿಗ್ಗಾವಿ: ಹೊರ ರಾಜ್ಯಗಳಿಂದ ಕರ್ನಾಟಕ ಪ್ರವೇಶ ಮಾಡಬೇಕೆಂದರೆ ಕೋವಿಡ್ ನೆಗೆಟಿವ್ ಇರುವುದು ಕಡ್ಡಾಯ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಶಿಗ್ಗಾವಿ ಜಿಲ್ಲೆಯ ಬಾಡ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಈ ನಿಯಮವನ್ನು ಪರಿಪಾಲನೆ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಲಾಕ್ ಡೌನ್ ಅನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಲವಾರು ನಿರ್ಬಂಧ ಹಾಕಲಾಗಿದೆ. ಎಲ್ಲ ಕಡೆ ಪೊಲೀಸ್ ನಾಕಾಬಂದಿ ಹಾಕಲಾಗಿದೆ. ವಿಶೇಷವಾಗಿ ಗಡಿ ಪ್ರದೇಶದಲ್ಲಿ ಮತ್ತಷ್ಟು ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಗಡಿಜಿಲ್ಲೆಗಳ ಮೂಲಕ ಹೊರರಾಜ್ಯದವರು ಕರ್ನಾಟಕವನ್ನು ಪ್ರವೇಶಿಸಲು ನೆಗೆಟಿವ್ ರಿಪೋರ್ಟ್ ಇಟ್ಟುಕೊಂಡಿರುವುದು ಕಡ್ಡಾಯ. ಇಲ್ಲದಿದ್ದರೆ ಯಾರನ್ನೂ ಕರ್ನಾಟಕದ ಒಳಗೆ ಪ್ರವೇಶಿಸಲು ಅವಕಾಶ ನೀಡುವುದಿಲ್ಲ. ಈ ಸಂಬಂಧ ಗಡಿ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಕಲಬುರ್ಗಿ, ಮಂಗಳೂರು, ಉಡುಪಿ ಗಡಿ ಜಿಲ್ಲೆಗಳಲ್ಲಿ ಹಾಗೂ ಆನೆಕಲ್ ನಲ್ಲಿ ಕಠಿಣ ನಿರ್ಬಂಧ ಹೇರುವಂತೆ ಆದೇಶಿಸಲಾಗಿದೆ ಎಂದರು.

ಗಡಿ ಪ್ರದೇಶಗಳಲ್ಲಿ ಕೆಲವರು ಒಳ ದಾರಿಗಳ ಮೂಲಕ ರಾಜ್ಯ ಪ್ರವೇಶ ಮಾಡಲು ಪ್ರಯತ್ನ ಮಾಡುತ್ತಾರೆ. ಅಂಥ ಕಡೆಗಳಲ್ಲಿ ಪೊಲೀಸರನ್ನು ನಿಯೋಜಿಸಿ. ನಾಕಾಬಂದಿ ಮಾಡಿ. ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಇದ್ದವರನ್ನು ಮಾತ್ರ ರಾಜ್ಯದೊಳಗೆ ಬಿಡುವಂತೆ ಸೂಚಿಸಲಾಗಿದೆ.
ಶಿರಸಿ ತಾಲೂಕು ಆಸ್ಪತ್ರೆ ಯೂನಿಟ್ ನಲ್ಲಿ ಆಕ್ಸಿಜನ್ ಸೋರಿಕೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button