ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜನರ ಪ್ರಾಣ ಉಳಿಸಲು ತುರ್ತು ಸಂದರ್ಭಗಳಲ್ಲಿ ಬೆಂಗಳೂರು ನಗರದಲ್ಲಿ ಮೊಬೈಲ್ ಆಕ್ಸಿಜನ್ ಸಿಲಿಂಡರ ಗಳ ಪೂರೈಕೆ ವ್ಯವಸ್ಥೆಯನ್ನು ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸೋಮವಾರ ಬೆಂಗಳೂರು ಪೂರ್ವವಲಯದ ಕೋವಿಡ್ ಸ್ಥಿತಿಗತಿ ಕುರಿತು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ನಡೆಸಿದ ಬಳಿಕ ಮಾತನಾಡಿದ ಅವರು, ಚೆನ್ನೈನಲ್ಲಿ ಒಂದು ಖಾಸಗಿ ಸಂಸ್ಥೆ ಮೊಬೈಲ್ ಆಕ್ಸಿಜನ್ ಪೂರೈಕೆ ಕೆಲಸ ಮಾಡುತ್ತಿದೆ. ಬಸ್ಸುಗಳಲ್ಲಿ ತುರ್ತು ಸಂದರ್ಭಗಳಲ್ಲಿ ಸೋಂಕಿತರಿಗೆ ಆಕ್ಸಿಜನ್ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ಅದೇ ಮಾದರಿಯನ್ನು ಅನುಸರಿಸಲು ಚಿಂತನೆ ನಡೆಸುತ್ತಿದ್ದೇವೆ. ಬಸ್ಸುಗಳಲ್ಲಿ ರೋಗಿಗಳು ಆಕ್ಸಿಜನ್ ಪಡೆದು ತಮ್ಮ ಜೀವ ರಕ್ಷಣೆ ಮಾಡಿಕೊಳ್ಳಲು ಮೊಬೈಲ್ ಆಕ್ಸಿಜನ್ ಗಳ ವ್ಯವಸ್ಥೆ ಮಾಡಬೇಕೆಂಬುದು ನಮ್ಮ ಉದ್ದೇಶ. ಅದೇರೀತಿ ಅಗತ್ಯವೆನಿಸಿದರೆ ಸೋಂಕಿತರ ಮನೆಗಳಿಗೂ ಆಕ್ಸಿಜನ್ ಕಳಿಸುವ ವ್ಯವಸ್ಥೆ ಮಾಡುವ ಕುರಿತು ಗಂಭೀರ ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಬೆಡ್ ಬ್ಲಾಕಿಂಗ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ . ಸಿಸಿಬಿ ಈ ಕುರಿತು ತನಿಖೆ ನಡೆಸುತ್ತಿದೆ. ಅಮಾಯಕರಿಗೆ ಯಾವುದೇ ರೀತಿಯ ತೊಂದರೆಯನ್ನು ಕೊಡದಂತೆ ಸೂಚಿಸಿದ್ದೇನೆ. ತಪ್ಪಿತಸ್ಥರಿಗೆ ಮಾತ್ರ ಶಿಕ್ಷೆ ನೀಡಲಾಗುವುದು. ಯಾರು ದುಡ್ಡಿಗಾಗಿ ಬೆಡ್ ಬ್ಲಾಕ್ ಮಾಡಿದ್ದಾರೋ ಅಂತವರಿಗೆ ಕಠಿಣ ಶಿಕ್ಷೆ ನೀಡಲಾಗುವುದು. ಇದರಲ್ಲಿ ಯಾವುದೇ ರೀತಿಯ ರಾಜಿ ಇಲ್ಲ. ಆದರೆ ಅಮಾಯಕರಿಗೆ ಈ ಸಂಬಂಧ ವಿನಾಕಾರಣ ತೊಂದರೆ ಕೊಡದಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಅವರು ತಿಳಿಸಿದರು.
ಬೆಂಗಳೂರಿನಲ್ಲಿ ನಾರಾಯಣ ಹೃದಯಾಲಯ, ಮಣಿಪಾಲ್ ಆಸ್ಪತ್ರೆ ಮುಂತಾದ ದೊಡ್ಡದೊಡ್ಡ ಆಸ್ಪತ್ರೆ ಪಕ್ಕದಲ್ಲಿರುವ ಹೋಟೆಲ್ಗಳ ರೂಮುಗಳನ್ನು step-down ಆಸ್ಪತ್ರೆ ಗಳನ್ನಾಗಿ ಪರಿವರ್ತನೆ ಮಾಡಲಾಗುತ್ತಿದೆ. ಒಟ್ಟು ಒಟ್ಟು 5000 step-down ಹಾಸ್ಪಿಟಲ್ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗಿದೆ ಅವುಗಳ ಪೈಕಿ ಈಗಾಗಲೇ 945 ಹಾಸ್ಪಿಟಲ್ ಗುರುತಿಸಲಾಗಿದೆ ಎಂದು ಅವರು ತಿಳಿಸಿದರು.
ಇದೇ ವೇಳೆ ಖಾಸಗಿ ವೈದ್ಯಕೀಯ ಕಾಲೇಜುಗಳು ತಮ್ಮ ಪಾಲಿನ 1035 ಹಾಸಿಗೆಗಳ ಪೈಕಿ ಈಗಾಗಲೇ 800 ಹಾಸಿಗೆಗಳನ್ನು ಸರ್ಕಾರದ ಸುಪರ್ದಿಗೆ ವಹಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ಬಾಕಿ 235 ಬೆಡ್ ಗಳನ್ನು ಸರ್ಕಾರದ ವಶಕ್ಕೆ ನೀಡಲಿವೆ ಎಂದರು.
ಸದಲಗಾ ಆರೋಗ್ಯ ಮತ್ತು ಕ್ಷೇಮ ಕೇಂದ್ರಕ್ಕೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಭೇಟಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ