
ಪ್ರಗತಿವಾಹಿನಿ ಸುದ್ದಿ: ಇಳಕಲ್ ಕಾರವಾರ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಇಂದು ನವದೆಹಲಿಯಲ್ಲಿ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದರು. ಕರ್ನಾಟಕದಲ್ಲಿ ರಸ್ತೆ ಹಾಗೂ ಹೆದ್ದಾರಿ ಮೂಲ ಸೌಕರ್ಯ ಅಭಿವೃದ್ದಿಯಲ್ಲಿ ಕ್ರಾಂತಿಕಾರಕ ಬದಲಾವಣೆಯಾಗಿದೆ. ಪ್ರಸ್ತುತ ಇಳಕಲ್ ಕಾರವಾರ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯನ್ನಾಗಿ ಪರಿವರ್ತಿಸುವುದು, ರೋಣ ತಾಲೂಕಿನ ಗಜೇಂದ್ರಗಢ ರಿಂಗ್ ರಸ್ತೆ ಹಾಗೂ ಗದಗ ರಿಂಗ್ ರಸ್ತೆ ಯೋಜನೆಗಳನ್ನು ಜಾರಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಸದ ಡಾ. ಸುಧಾಕರ್ ಹಾಜರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ