
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ದೇವರ ಹೆಸರಿನಲ್ಲಿ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಮಾಣವಚನ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ವೀಕ್ಷಕರಾದ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಡಿಸಿಎಂಗಳಾಗಿ ನಿಯೋಜನೆಗೊಂಡಿರುವ ಆರ್.ಅಶೋಕ್, ಗೋವಿಂದ ಕಾರಜೋಳ, ಶ್ರೀರಾಮುಲು, ಮುರುಗೇಶ್ ನಿರಾಣಿ, ಮಾಜಿ ಸಚಿವರುಗಳು, ಕಾಂಗ್ರೆಸ್ ನಾಯಕ ಆರ್.ವಿದೇಶಪಾಂಡೆ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಪ್ರಮಾಣವಚನಕ್ಕೂ ಮುನ್ನ ದೇವರದರ್ಶನ; ಯಡಿಯೂರಪ್ಪ ಭೇಟಿಯಾದ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ