Latest

11 ಗಂಟೆಗೆ ಪ್ರಮಾಣವಚನ; ಸಂಪುಟ ರಚನೆ ಬಗ್ಗೆ ಮಹತ್ವದ ಮಾಹಿತಿ ತಿಳಿಸಿದ ನೂತನ ಸಿಎಂ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು;  ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಪದಗ್ರಹಣ ಮಾಡಲಿದ್ದಾರೆ.

ಈ ಕುರಿತು ಮಾತನಾಡಿರುವ ನಿಯೋಜಿತ ಸಿಎಂ ಬಸವರಾಜ್ ಬೊಮ್ಮಾಯಿ, ರಾಜಭವನದಲ್ಲಿ ನಡೆಯುವ ಸರಳ ಸಮಾರಂಭದಲ್ಲಿ 11 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ನಾವಿಧಿ ಬೋಧಿಸಲಿದ್ದಾರೆ. ಬಳಿಕ ಸುದ್ದಿಗೋಷ್ಠಿ ನಡೆಸುವುದಾಗಿ ತಿಳಿಸಿದರು.

Home add -Advt

ಪ್ರಮಾಣವಚನದ ಬಳಿಕ ಸಚಿವ ಸಂಪುಟ ಸಭೆ ನಡೆಸಲಾಗುವುದು, ಅಧಿಕಾರಿಗಳೊಂದಿಗೆ ಕೋವಿಡ್ ಹಾಗೂ ಪ್ರವಾಹ ಸಂಕಷ್ಟದ ಬಗ್ಗೆ ಚರ್ಚೆ ನಡೆಸಲಾಗುವುದು. ನಂತರ ರಾಜ್ಯ ಪ್ರವಾಸ ಕೈಗೊಳ್ಳುತ್ತೇನೆ. ಹಿರಿಯರ ಅನುಮತಿ ಪಡೆದು ಶೀಘ್ರದಲಿಯೇ ಸಂಪುಟ ರಚನೆ ಮಾಡಲಾಗುವುದು ಎಂದು ಹೇಳಿದರು.

Related Articles

Back to top button