Latest

ಪೊಲೀಸ್ ಕುಟುಂಬದವರಿಗೂ ಕೊರೊನಾ ಲಸಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಶೇ.95ರಷ್ಟು ಸಿಬ್ಬಂದಿಗೆ ಈಗಾಗಲೇ ಕೊರೋನಾ ಲಸಿಕೆ ಹಾಕಲಾಗಿದ್ದು, ಮುಂದಿನ ದಿನಗಳಲ್ಲಿ ಎರಡನೇ ಹಂತವಾಗಿ ಪೊಲೀಸ್ ಸಿಬ್ಬಂದಿಯ ಕುಟುಂಬದವರಿಗೂ ಕೊರೊನಾ ಲಸಿಕೆ ನೀಡಲಾಗುವುದು ಎಂದು ಗೃಹ, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು

ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಸಚಿವರಾದ ಆರ್ ಅಶೋಕ್ ಹಾಗೂ ಡಾ.ಕೆ ಸುಧಾಕರ್ ಜೊತೆ ಭೇಟಿ ನೀಡಿ ಬ್ಲ್ಯಾಕ್ ಫಂಗಸ್ ಸೋಂಕಿನ ಕುರಿತು ವೈದ್ಯಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಪೊಲೀಸರಷ್ಟೇ ಅಲ್ಲ. ಪೊಲೀಸರ ಕುಟುಂಬದವರು ಕೂಡ ಕೊರೊನಾ ಯೋಧರು ಎಂದು ಪರಿಗಣಿಸಿ ಎರಡನೇ ಹಂತದಲ್ಲಿ ಅವರಿಗೂ ಕೊರನಾ ಲಸಿಕೆ ಹಾಕಲಾಗುವುದು. ಈಗಾಗಲೇ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಈ ಸಂಬಂದ ಸೂಚನೆ ನೀಡಲಾಗಿದೆ ಎಂದರು.

ರಾಜ್ಯದಲ್ಲಿನ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪೊಲೀಸರಿಗಾಗಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದೆ. ಅಲ್ಲಿ ಆಕ್ಸಿಜನ್ ಕಾನ್ಸೆಂಟ್ರೇಟರ್ ಅಳವಡಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಂಖ್ಯೆಯ ಆಕ್ಸಿಜನ್ ಕಾನ್ಸೆಂಟ್ರೇಟರ್ ಗಳನ್ನು ಅಲ್ಲಿ ಅಳವಡಿಸಲಾಗುವುದು ಎಂದು ಹೇಳಿದರು.

ನಮ್ಮ ಇಲಾಖೆಯಲ್ಲಿ ಹಲವಾರು ವಾಹನಗಳಿವೆ. ಕೆ ಎಸ್ ಆರ್ ಪಿಯಲ್ಲಿ ಬಸ್ಸುಗಳಿವೆ. ಅವುಗಳನ್ನು ಅಂಬುಲೆನ್ಸ್ ಗಳನ್ನಾಗಿ ಪರಿವರ್ತನೆ ಮಾಡಲು ನಿರ್ಧರಿಸಲಾಗಿದೆ. ಎಲ್ಲ ವಲಯಗಳಲ್ಲಿನ ಕೆ ಎಸ್ ಆರ್ ಪಿ ವಾಹನಗಳನ್ನು ಅಂಬುಲೆನ್ಸ್ ಗಳನ್ನಾಗಿ ಪರಿವರ್ತನೆ ಮಾಡಿ ಕೋವಿಡ್ ಕೇರ್ ಸೆಂಟರ್ ಗೆ ಜೋಡಣೆ ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಬ್ಲ್ಯಾಕ್ ಫಂಗಸ್ ಸೋಂಕಿನ ಚಿಕಿತ್ಸೆಗೆ ಆಸ್ಪತ್ರೆಗಳಲ್ಲಿ 10 ಹಾಸಿಗೆಗಳನ್ನು ಪ್ರತ್ಯೇಕವಾಗಿ ತೆಗೆದಿಡಲು ಸರ್ಕಾರ ಕ್ರಮ‌ಕೈಗೊಳ್ಳಲಿದೆ. ಔಷಧಿ ವಿಚಾರವಾಗಿ ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿವಿ ಸದಾನಂದ ಗೌಡರ ಜೊತೆ ಮಾತುಕತೆ ನಡೆಸಲಾಗಿದೆ ಎಂದು ಅವರು ಹೇಳಿದರು.
ಮೊದಲ ಸೋಲಾರ್ ಹೆರಿಗೆ ಆಸ್ಪತ್ರೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button