
ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪರ್ಸನಲ್ ಸೆಕ್ರೆಟರಿ ಅವರ ಪುತ್ರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
20 ವರ್ಷದ ಹೇಮಂತ್ ಮೃತ ಯುವಕ. ಪಿಎಸ್ ಆಗಿದ್ದ ಚಂದ್ರು ಅವರ ಪುತ್ರ ಹೇಮಂತ್ ಬೆಂಗಳೂರಿನ ಸಂಜಯನಗರ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಘಟನಾ ಸ್ಥಳಕ್ಕೆ ಸಂಜಯನಗರ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.




