Kannada NewsKarnataka NewsLatestPolitics

*ಎಲ್ಲರೂ ಒಗ್ಗಟ್ಟಾಗಿ ಹೋದರೆ ರಾಜ್ಯದಲ್ಲಿ 28 ಎಂಪಿ ಸ್ಥಾನ ಗೆಲ್ಲಬಹುದು: ಮಾಜಿ ಸಿಎಂ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಲ್ಲರೂ ಒಗ್ಗಟ್ಟಾಗಿ‌ ನಡೆದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ 28 ಸ್ಥಾನಗಳನ್ನು ಗೆಲ್ಲಬಹುದು. ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುವ ವಿಶ್ವಾಸ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ಬಿಜೆಪಿ ಕಚೇರಿಯಲ್ಲಿ ಬುಧವಾರ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸೂಕ್ತ ಸಮಯದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ. ಅವರನ್ನು ಅಧ್ಯಕ್ಚರನ್ನಾಗಿ ಮಾಡಿದ ಪಕ್ಷದ ವರಿಷ್ಠರಾದ ಜೆ.ಪಿ‌. ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.


ವಿಧಾನಸಭೆ ಚುನಾವಣೆ ನಂತರ ಬಿಜೆಪಿಗೆ ದೊಡ್ಡ ಶಕ್ತಿ, ಉತ್ಸಾಹ ಬಂದಿದೆ. ಎಲ್ಲರೂ ಒಟ್ಟಾಗಿ ನಡೆದರೆ ಲೋಕಸಭೆಯಲ್ಲಿ ಯಶಸ್ಸು ಆಗುತ್ತದೆ. ಕ್ರಿಕೆಟ್ ವಿಶ್ವಕಪ್ ನಲ್ಲಿ ಭಾರತ ಗೆಲ್ಲುವ ರೀತಿಯಲ್ಲೇ ವಿಜಯೇಂದ್ರ ಸಾರಥ್ಯದಲ್ಲಿ ಬಿಜೆಪಿ 28 ಲೋಕಸಭಾ ಕ್ಷೇತ್ರ ಪಡೆದುಕೊಳ್ಳುವ ವಿಶ್ವಾಸವಿದೆ. ವಿಜಯೇಂದ್ರ ಅವರಿಗೆ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ ಎಂದರು.

Home add -Advt

Related Articles

Back to top button