*ಯತ್ನಾಳ್ ಗೆ ವೇದಿಕೆಯಲ್ಲೇ ಮಾತಲ್ಲೇ ತಿರುಗೇಟು ನೀಡಿದ ಮಾಜಿ ಸಿಎಂ ಬೊಮ್ಮಾಯಿ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ನಾಯಕರಿಂದಲೇ ಹೊಂದಾಣಿಕೆ ರಾಜಕಾರಣ ನಡೆದಿದೆ ಎಂದು ಸ್ವಪಕ್ಷ ನಾಯಕರೇ ಆರೋಪ ಮಾದಿರುವ ವಿಚಾರವಾಗಿ ಮಾತನಾದಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ರಾಜಕಾರಣದಲ್ಲಿ ಹೊಂದಾಣಿಕೆ ರಾಜಕೀಯ ಮಾಡಿಲ್ಲ, ಮಾಡುವುದೂ ಇಲ್ಲ ಎಂದು ಹೇಳಿದರು.
ಬೆಳಗಾವಿ ಜಿಲ್ಲಾ ಬಿಜೆಪಿ ಸಮಾವೇಶದಲ್ಲಿ ಮಾತಾಡಿದ ಬಸವರಾಜ್ ಬೊಮ್ಮಾಯಿ, ರಾಜಕಾರಣದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿಲ್ಲ, ಮಾಡಿಕೊಳ್ಳುವುದೂ ಇಲ್ಲ ಎಂದರು.
ಡಿ.ಕೆ.ಶಿವಕುಮಾರ್, ಬಿಎಸ್ ವೈ ಹಾಗೂ ಬೊಮ್ಮಾಯಿ ಮನೆಗೆ ಭೇಟಿ ವಿಚಾರವಾಗಿ ಪರೋಕ್ಷವಾಗಿ ಟಾಂಗ್ ನೀಡಿದ್ದ ಶಾಸಕ ಯತ್ನಾಳ್ ಹೇಳಿಕೆಗೂ ತಿರುಗೇಟು ನೀಡಿದ ಮಾಜಿ ಸಿಎಂ ಬೊಮ್ಮಾಯಿ, ಸೌಹಾರ್ದಯುತವಾಗಿ ಮನೆಗೆ ಬರುವವರನ್ನು ಬೇಡ ಎನ್ನಲು ಆಗುವುದಿಲ್ಲ, ಅದು ಕರ್ನಾಟಕದ ಸಂಸ್ಕೃತಿಯೂ ಅಲ್ಲ. ಕೆಲವರು ಮನೆಗೆ ಹೋಗದೇ ರಾಜಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.
ಬಿಜೆಪಿ ತಾಯಿ ಸಮಾನ, ಕಾರ್ಯಕರ್ತರು ಅಣ್ಣತಮ್ಮಂದಿರ ಸಮಾನ. ಬಿಜೆಪಿ ಕಾರ್ಯಕರ್ತರಿಗೆ ದ್ರೋಹ ಮಾಡುವ ಕೆಲಸವನ್ನು ಯಾವತ್ತೂ ಮಾಡಿಲ್ಲ ಎಂದರು.
ಇದೇ ವೇಳೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಹಾರದ ಪಾಟ್ನಾದಲ್ಲಿ ವಿಪಕ್ಷ ನಾಯಕರ ಸಭೆ ವಿಚಾರವಾಗಿ ಮಾತನಾಡಿದ ಅವರು, ದೇಶ ಉದ್ಧಾರಕ್ಕಾಗಿ ವಿಪಕ್ಷ ನಾಯಕರು ಸಭೆ ನಡೆಸಿಲ್ಲ. ಬದಲಾಗಿ ಪ್ರಧಾನಿ ಮೋದಿಯವರನ್ನು ಸೋಲಿಸುವುದು ಹೇಗೆ ಎಂದು ಚರ್ಚಿಸಲು ಸಭೆ ಮಾಡಿದ್ದಾರೆ. ಪ್ರಧಾನಿ ಮೋದಿ ಸೋಲಲ್ಲ, ರಾಹುಲ್ ಗಾಂಧಿ ಮದುವೆ ಆಗಲ್ಲ ಎಂದು ವ್ಯಂಗ್ಯವಾಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ