![](https://pragativahini.com/wp-content/uploads/2023/06/Basavaraj-Bommai.jpg)
ಪ್ರಗತಿವಾಹಿನಿ ಸುದ್ದಿ: ಚುನಾವಣೆಯಲ್ಲಿ ಸೋತಾಗ ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ. ವಿರೋಧ ಪಕ್ಷಗಳು ನಿರಂತರವಾಗಿ ಈ ಆರೋಪವನ್ನು ಮಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೆಹಲಿ ವಿಧಾನಾಭೆ ಚುನಾವಣೆ ಸ್ಪಷ್ಟ ಸಂದೇಶ ನೀಡಿದೆ. ಯಾರು ದೇಶದ ಬಗ್ಗೆ ಚಿಂತನೆ ಮಾಡುತ್ತಾರೆ. ದೇಶದ ಅಭಿವೃದ್ಧಿ ಮಾಡುತ್ತಾರೆ. ಯಾರು ದೇಶ ಕಟ್ಟುತ್ತಾರೆ ಅವರಿಗೆ ಜನ ಬೆಂಬಲ ಇದೆ ಎನ್ನುವುದು ಬಹಳ ಸ್ಪಷ್ಟವಾಗಿದೆ. ದೇಶದ ವಿಭಜನೆ ಬಗ್ಗೆ ದೇಶದ ಹಿತವನ್ನು ಮರೆತು ವಿದೇಶದಲ್ಲಿ ಮಾತನಾಡುವವರಿಗೆ ಜನರು ಪಾಠ ಕಲಿಸಿದ್ದಾರೆ ಎಂದರು.
ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ. ತಮ್ಮ ಸೋಲನ್ನು ಒಪ್ಪಿಕೊಳ್ಳದೇ ಕುಂಟು ನೆಪ ಹೇಳುವುದು ನಾಯಕನ ಲಕ್ಷಣ ಅಲ್ಲ. ವಿರೋಧ ಪಕ್ಷಗಳು ನಿರಂತರವಾಗಿ ಈ ಆರೋಪವನ್ನು ಮಾಡುತ್ತಿವೆ ಎಂದು ಹೇಳಿದರು.
ಹೈಕಮಾಂಡ್ ಗಟ್ಟಿಯಾಗಿದೆ
ರಾಜ್ಯ ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ. ನಮ್ಮದು ಪ್ರಜಾಪ್ರಭುತ್ವ ಇರುವ ಪಕ್ಷ. ನಮ್ಮ ಹೈಕಮಾಂಡ್ ಬಹಳ ಗಟ್ಟಿಯಾಗಿದೆ. ಈಗ ದೆಹಲಿ ಚುನಾವಣೆ ಮುಗಿದಿದೆ. ಸಂಘಟನೆಗೆ ಹೆಚ್ಚು ಸಮಯ ನೀಡುತ್ತಾರೆ. ಆಗ ಕರ್ನಾಟಕದ ಬಗ್ಗೆಯೂ ನಿರ್ಣಯ ಆಗುತ್ತದೆ. ಎಲ್ಲವೂ ಅತ್ಯಂತ ಸುಖಾಂತ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಅವರ ಹೆಸರು ಸೂಚಿಸಿದ್ದೀರಾ ಎನ್ನುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ನಾನು ಯಾರ ಹೆಸರನ್ನೂ ಸೂಚಿಸಿಲ್ಲ. ನಾನು ಸಂಸದನಾಗಿ ನನ್ನ ಕೆಲಸವನ್ನು ಮಾಡುತ್ತಿದ್ದೇನೆ. ನಿಮ್ಮ ಮೂಲಗಳಿಗೆ ನೀವೆ ಉತ್ತರ ಕೊಡಬೇಕು. ಏನೇ ಇದ್ದರೂ ಪಕ್ಷದ ಹೈಕಮಾಂಡ್ ಒಳ್ಳೆಯ ತೀರ್ಮಾನ ಮಾಡುತ್ತದೆ ಎನ್ನುವ ವಿಶ್ವಾಸ ಇದೆ. ಹೈಕಾಂಡ್ ಯಾರನ್ನು ಆಯ್ಕೆ ಮಾಡುತ್ತಾರೋ ಅವರೇ ಉತ್ತಮ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ