Uncategorized
*ವರ್ಗಾವಣೆ ದಂಧೆ ಬಗ್ಗೆಯೂ ಸದನದಲ್ಲಿ ಪ್ರಸ್ತಾಪ ಮಾಡುತ್ತೇವೆ; ದಾಖಲೆಗಳನ್ನೂ ಇಡುತ್ತೇವೆ ಎಂದ ಮಾಜಿ ಸಿಎಂ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರು ಅವರ ಬಳಿ ಏನು ದಾಖಲೆ ಇದೆ ಅದನ್ನು ಅವರು ಕೊಡಲಿ, ನಾವು ನಮ್ಮ ಬಳಿ ಇರುವ ದಾಖಲೆಗಳನ್ನು ಕೊಡುತ್ತೇವೆ. ಸರ್ಕಾರದ ವಿರುದ್ಧ ಹೋರಾಟ ಮುಂದುವರೆಯಲಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಮಾಜಿ ಸಿಎಮ್ ಬೊಮ್ಮಾಯಿ, ವರ್ಗಾವಣೆ ದಂಧೆ ಬಗ್ಗೆಯೂ ನಾವು ಸದನದಲ್ಲಿ ಪ್ರಸ್ತಾಪ ಮಾಡುತ್ತೇವೆ. ನಮ್ಮ ಬಳಿ ಇರುವ ದಾಖಲೆಗಳನ್ನು ಇಡುತ್ತೇವೆ ಎಂದು ಹೇಳಿದರು.
ರಾಜ್ಯದಲ್ಲಿ ಬರ ಬಂದಿದೆ, ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ ಇದೆಲ್ಲದರ ಬಗ್ಗೆ ಚರ್ಚೆ ಮಾಡಬೇಕಿದೆ. ಸರ್ಕಾರ ದೊಖಾ ಮಾಡಿದೆ. ನಮ್ಮ ಬೇಡಿಕೆ ಇಷ್ಟೆ ಕಾಂಗ್ರೆಸ್ ನಾಯಕರು ಜನರಿಗೆ ಕೊಟ್ಟ ಗ್ಯಾರಂಟಿ ಭರವಸೆಗಳನ್ನು ಮೊದಲು ಈಡೇರಿಸಲಿ ಎಂಬುದು ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ