LatestUncategorized

*ವಿದ್ಯುತ್ ನೀಡದಿದ್ದರೆ ಕುಡಿಯುವ ನೀರಿಗೆ ಹಾಹಾಕಾರ: ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ; ಹಾವೇರಿ: ರಾಜ್ಯ ಸರ್ಕಾರ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡದಿದ್ದರೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶಿಗ್ಗಾವಿ ತಾಲೂಕಿನ ಮಡ್ಲಿ ಗ್ರಾಮದಲ್ಲಿ ನೂತನ ಶಾಲಾ ಕಟ್ಟಡಗಳ ಉದ್ಘಾಟನೆ ಮಾಡಿ ಮಾತನಾಡಿದ ಅವರು, ವಿದ್ಯುತ್ ದರ ಹೆಚ್ಚಿಗೆ ಮಾಡಿರುವುದರಿಂದ ಜನರು ಬಿಲ್ ಕಟ್ಟಲು ನಿರಾಕರಿಸುತ್ತಿದ್ದಾರೆ. ದರ ಕಟ್ಟಲಿಲ್ಲಾ ಎಂದರೆ ಕರೆಂಟ್ ಸಪ್ಲೆ ಆಗುವುದಿಲ್ಲ. ರಾಜ್ಯದಲ್ಲಿ ಮಳೆ ಇಲ್ಲ, ಬರ ಆಗಿದೆ. ರೈತರಿಗೂ ಹಾಗೂ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆ ಆಗಿದೆ ಎಂದರು.

Related Articles

ಜನರಿಗೆ ಕುಡಿಯುವ ನೀರು ಸರಬರಾಜು ಆಗಲು ವಿದ್ಯುತ್ ಬೇಕು. ಬೋರ್ ವೆಲ್ ಗಳಿಂದ ಹಾಗೂ ಅನೇಕ ಕೆಲಸಗಳಿಗೆ ವಿದ್ಯುತ್ ಬೇಕೆ ಬೇಕು. ಸರ್ಕಾರ ವಿದ್ಯುತ್ ನೀಡದಿದ್ದರೆ ಕುಡಿಯುವ ನೀರಿಗೆ ಹಾಹಾಕಾರ ಆಗುತ್ತದೆ. ಹೈಡ್ರೊ ಎಲೆಕ್ಟ್ರಿಕ್ ಪವರ್ ಕೊರತೆ ಇದೆ. ಹೀಗಾಗಿ ವಿದ್ಯುತ್ ಇಲಾಖೆಯ ಎಲ್ಲಾ ನಿಗಮಗಳಿಗೆ ಹಣ ಬಿಡುಗಡೆ ಮಾಡಬೇಕು. ಇವರು ಸರಿಯಾದ ಕ್ರಮ ತೆಗೆದುಕೊಳ್ಳದಿದ್ದರೆ, ವಿದ್ಯುತ್ ಶಕ್ತಿಯ ಕ್ಷಾಮ ಆಗುತ್ತದೆ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button