Politics

*ಸಂಸದ ಗೋವಿಂದ ಕಾರಜೋಳ ಅವರ ಹೇಳಿಕೆಯಲ್ಲಿ ಸತ್ಯಾಂಶ ಇರುತ್ತದೆ: ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಬಹಳ ದೊಡ್ಡ ರಾಜಕೀಯ ಬೆಳವಣಿಗೆಯಾಗುತ್ತದೆ. ರಾಜ್ಯ ಕಾಂಗ್ರೆಸ್ ಶಾಸಕರ ಅಸಮಾಧಾನದ ಬಗ್ಗೆ ಸಂಸದ ಗೋವಿಂದ ಕಾರಜೊಳ ಅವರ ಹೇಳಿಕೆಯಲ್ಲಿ ಸತ್ಯಾಂಶ ವಿರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ದಾವರಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೋವಿಂದ ಕಾರಜೋಳ ಅವರು ಬಿಜೆಪಿಯ ಹಿರಿಯ ಮುಖಂಡ. ಬಹಳ ವರ್ಷದಿಂದ ರಾಜಕಾರಣದಲ್ಲಿದ್ದಾರೆ ಮುತ್ಸದ್ದಿ ರಾಜಕಾರಣಿಯಾಗಿದ್ದಾರೆ. ಅವರು ಪಕ್ಕಾ ಮಾಹಿತಿ ಇಟ್ಟುಕೊಂಡೇ ಹೇಳಿರುತ್ತಾರೆ ಎಂದು ಹೇಳಿದರು.


ಕಾಂಗ್ರೆಸ್ ಶಾಸಕರೇ ಪಕ್ಷದ ವರಿಷ್ಠರ ವಿರುದ್ದ ತಿರುಗಿಬಿದ್ದಿದ್ದಾರೆ. ಜನರ ಬಳಿಗೆ ಹೋಗಲು ಅವರಿಗೆ ಮುಖ ಇಲ್ಲ ಶಾಸಕರ ಅನುದಾನ ಇಲ್ಲ . ಆಡಳಿತ ಹದಗೆಟ್ಟಿದೆ , ಅಧಿಕಾರಿಗಳು ಸರ್ಕಾರದ ಮಾತು ಕೇಳುತ್ತಿಲ್ಲ ರಾಜ್ಯದಲ್ಲಿ ಸರ್ಕಾರ ಇದಿಯೋ ಇಲ್ಲ ಎನ್ನುವಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂದು ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

Home add -Advt

Related Articles

Back to top button