
ಮಾಜಿ ಸಿಎಂ ಸ್ಫೋಟಕ ಹೇಳಿಕೆ
ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿಗೆ ಮರಳಿರುವ ಬೆನ್ನಲ್ಲೇ ಮತ್ತಷ್ಟು ಕಾಂಗ್ರೆಸ್ ನಾಯಕರು ಬಿಜೆಪಿಗೆ ಬರಲಿದ್ದಾರೆ. ಕಾದು ನೋಡಿ ಎಂದು ಮಾಜಿ ಸಿಎಂ ಬಸಾರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಟಿಕೆಟ್ ಸಿಗದ ಕಾರಣ ಜಗದೀಶ್ ಶೆಟ್ಟರ್ ಗೆ ಬಹಳ ಬೇಸರವಾಗಿತ್ತು. ಆರು ಬಾರಿ ಆಯ್ಕೆಯಾದವರು, ಮಾಜಿ ಸಿಎಂ ಆಗಿದ್ದವರು ಆದರೂ ಟಿಕೆಟ್ ಸಿಕ್ಕಿಲ್ಲ ಎಂದು ತುಂಬಾ ನೊಂದು ಆವೇಶದಲ್ಲಿ ಪಕ್ಷ ಬಿಟ್ಟು ಕಾಂಗ್ರೆಸ್ ಗೆ ಸೇರಿದ್ದರು. ಆವೇಶದಲ್ಲಿ, ಆತುರದಲ್ಲಿ ಕೈಗೊಳ್ಳುವ ನಿರ್ಧಾರ ಯಾವತ್ತೂ ಹೆಚ್ಚು ಕಾಲ ಇರುವುದಿಲ್ಲ. ಅವರು ಮರಳಿ ಬರ್ತಾರೆ ಎಂಬ ನಿರೀಕ್ಷೆ ಇತ್ತು. ಈಗ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ ಎಂದರು.
ಕಾಂಗ್ರೆಸ್ ನ ಮತ್ತಷ್ಟು ನಾಯಕರು ಬಿಜೆಪಿಗೆ ಸೇರ್ಪಡೆಯಾಗೋದು ಫಿಕ್ಸ್. ಲೋಕಸಭಾ ಚುನವಣೆ ವೇಳೆ ಇನ್ನಷ್ಟು ನಾಯಕರು ಬಿಜೆಪಿಗೆ ಬರಲಿದ್ದಾರೆ. ಕಾಂಗ್ರೆಸ್ ಸರ್ಕಾರ ಇದ್ದರೂ ದೊಡ್ಡ ಸಂಖ್ಯೆಯಲ್ಲಿ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ. ಈಗಾಗಲೇ ಹಲವು ನಾಯಕರು ಬಿಜೆಪಿಯತ್ತ ಮುಖ ಮಾಡಿದ್ದಾರೆ. ಇದಿನ್ನೂ ಪ್ರಾಥಮಿಕ ಹಂತ ಅಷ್ಟೇ, ಮುಂದೆ ಕಾದುನೋಡಿ ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ