Kannada NewsKarnataka NewsLatestPolitics

*ಜನಸೇವಾ ಟ್ರಸ್ಟ್ ಗೆ ನೀಡಿದ ಜಮೀನು ತಡೆ: ಸೇಡಿನ ರಾಜಕಾರಣ; ಮುಂದಿನ ಹೋರಾಟದ ಬಗ್ಗೆ ಚರ್ಚಿಸಿ ತೀರ್ಮಾನ; ಮಾಜಿ ಸಿಎಂ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾಲದಲ್ಲಿ ಯಾವುದೇ ಭ್ರಷ್ಟಾಚಾರ ನಡದೇ ಇಲ್ಲ ಅಂತ ಹೇಳಿದ್ದಾರೆ. ಅವರ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರ ನಡೆಯದಿದ್ದರೆ 2013 ರಿಂದ ಎಲ್ಲ ಪ್ರಕರಣಗಳ ಬಗ್ಗೆ ತನಿಖೆ ನಡೆಸಲಿ. ಅವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಸಿಲುಕಿರುವ ಭಯ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಕಾಲದಲ್ಲಿ ಭ್ರಷ್ಟಾಚಾರ ನಡೆದಿರದಿದ್ದರೆ ನ್ಯಾಯಾಂಗ ಆಯೋಗ ಯಾಕೆ ರಚನೆ ಆಯಿತು. ಎಸಿಬಿ ಮಾಡಿದ್ದೇ ಭ್ರಷ್ಟಾಚಾರ ಮುಚ್ಚಿ ಹಾಕಲು. ಇದು ಇಡಿ ಜಗತ್ತಿಗೆ ಗೊತ್ತು ಎಂದು ಹೇಳಿದರು.

ಸಣ್ಣ ನೀರಾವರಿ, ದೊಡ್ಡ ನೀರಾವರಿ ಎಲ್ಲದರಲ್ಲೂ ಭ್ರಷ್ಟಾಚಾರ ನಡೆದಿದೆ. ಅವರಿಗೆ ಭಯ ಇಲ್ಲದಿದ್ದರೆ 2013 ರಿಂದ ಎಲ್ಲ ಪ್ರಕರಣಗಳನ್ನು ತನಿಖೆಗೆ ವಹಿಸಲಿ, ಅವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಸಿಲುಕಿಕೊಳ್ಳುವ ಭಯ ಇದೆ. ಯಡಿಯೂರಪ್ಪ ಅವರು ತಮ್ಮ ಕಾಲದ ಅವಧಿಯ ಅಕ್ರಮ ಗಣಿಗಾರಿಕೆಯ ಪ್ರಕರಣಗಳನ್ನು ತನಿಖೆಗೆ ನೀಡಿದ್ದರು ಎಂದರು.

Home add -Advt

ಇವರ ಅವಧಿಯಲ್ಲಿ ಸೇಡಿನ ರಾಜಕಾರಣ ನಡೆಯುತ್ತಿದೆ ಅದರ ಪರಿಣಾಮ ಜನಸೇವಾ ಟ್ರಸ್ಟ್ ಗೆ ನೀಡಿರುವ ಜಮೀನು ತಡೆ ಹಿಡಿಯುವ ಪ್ರಯತ್ನ ಮಾಡಿದ್ದಾರೆ‌. ಜನಸೇವಾ ಟ್ರಸ್ಟ್ ತನ್ನದೇ ಆದ ರೀತಿಯಲ್ಲಿ ಸೇವೆ ಮಾಡುತ್ತಿದೆ. ಈ ಬಗ್ಗೆ ನಮ್ಮ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ ಮುಂದಿನ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button