Kannada NewsKarnataka NewsLatestPolitics

*ನಮ್ಮ ಅವಧಿಯ ಕೆಲಸಗಳನ್ನು ತಮ್ಮ ಸಾಧನೆ ಎಂದು ಹೇಳಿಕೊಂಡಿದ್ದಾರೆ: ಮಾಜಿ ಸಿಎಂ ಬೊಮ್ಮಾಯಿ ಆರೋಪ*

ಪ್ರಗತಿವಾಹಿನಿ ಸುದ್ದಿ: ನಮ್ಮ ಕಾಲದಲ್ಲಿ‌‌ ಜಾರಿಗೆ ತಂದ ಯೋಜನೆಗಳನ್ನು ತಮ್ಮ ಸಾಧನೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ಇಂದು ಆರಂಭವಾದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಇಂತಹ ಸಪ್ಪೆ, ನಿರಾಸೆಯ ಭಾಷಣ ಯಾವತ್ತೂ ಕೇಳಿರಲಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿರುವ ಜನವಿರೊಧಿ ಸರ್ಕಾರ ಇರುವುದನ್ನು ತೋರಿಸುತ್ತದೆ.‌ ರಾಜ್ಯಪಾಲರ ಭಾಷಣದಲ್ಲಿ ಸರ್ಕಾರ ಯಾವುದೆ ವಿಚಾರದಲ್ಲಿ ಸಾಧನೆ ಮಾಡಿರುವುದು ಕಾಣಿಸುವುದಿಲ್ಲ. ನಾವು ಮಾಡಿರುವ ಯೋಜನೆಗಳನ್ನು ತಮ್ಮ ಸಾಧನೆ ಎಂದು ಹೇಳಿಕೊಂಡಿದ್ದಾರೆ. ಜಲಜೀವನ್ ಮಿಷನ್, ಬಡವರಿಗೆ ಮನೆ‌ ನಿರ್ಮಾಣ ಎಲ್ಲವೂ ನಮ್ಮ ಯೋಜನೆಗಳು ಹುಬ್ಬಳ್ಳಿಯಲ್ಲಿ ಜಯದೇವ ಆಸ್ಪತ್ರೆ ನಮ್ಮ ಅವಧಿಯಲ್ಲಿ ಆರಂಭಿಸಿಧ್ದೇವೆ ಅದನ್ನು ತಮ್ಮ ಸಾಧನೆ ಎಂದು ಬಿಂಬಿಸಿಕೊಂಡಿದ್ದಾರೆ‌ ಎಂದು ಹೇಳಿದರು.


ನೀರಾವರಿ ಯೋಜನೆಗಳಿಗೆ ಎಂಟು ತಿಂಗಳಲ್ಲಿ 10 ಸಾವಿರ ಕೋಟಿ ಖರ್ಚು ಮಾಡಿದ್ದೇವೆ ಎಂದು ಹೇಳಿದ್ದಾರೆ. ಯಾವ ಯೋಜನೆಗೆ ಎಷ್ಟು ಖರ್ಚು ಮಾಡಿದ್ಸಾರೆ ಎಂದು ದಾಖಲೆ ನೀಡಲಿ. ತಮ್ಮ ಬೆನ್ನು ತಾವೆ ತಟ್ಟಿಕೊಳ್ಳುವ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಶಾಸಕರು ಕ್ಷೇತ್ರದಲ್ಲಿ ತಿರುಗಾಡದಂತಹ ಪರಿಸ್ಥಿತಿ ಇದೆ. ಅವರನ್ನು ಕೆಳಿದರೆ ಸರ್ಕಾರ ಸಾಧನೆ ಏನು ಅಂತ ಗೊತ್ತಾಗುತ್ತದೆ. ಬರ ಪರಿಹಾರಕ್ಕೆ ಹಣ ಬಿಡುಗಡೆ ಮಾಡಿಲ್ಲ. ಡಿಸಿ ಅಕೌಂಟ್ ನಲ್ಲಿ ಹಣ ಇದೆ ಎಂದು ಹೇಳುತ್ತಾರೆ. ಅವರು ಇದುವರೆಗೂ ಹಣ ಬಿಡುಗಡೆ ಮಾಡಿಲ್ಲ. ರಾಜ್ಯಪಾಲರಿಂದ ಸುಳ್ಳು ಹೇಳುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು.


ಕೇಂದ್ರದ ಅನುದಾನ ಬಂದಿಲ್ಲ ಎಂದು ಮಾಡಿರುವ ಆರೋಪದ ಕುರಿತು ಸದನದಲ್ಲಿ ಚರ್ಚೆ ಮಾಡುತ್ತೇವೆ. ಯುಪಿಎ ಅವಧಿಯಲ್ಲಿ ಎಷ್ಟು ಬಂದಿದೆ. ಎನ್ ಡಿಎ ಅವಧಿಯಲ್ಲಿ ಎಷ್ಟು ಅನುದಾನ ಬಂದಿದೆ ಎನ್ನುವುದು ದಾಖಲೆ ಇದೆ. ಕೇಂದ್ರದ ಆಯುಷ್ಮಾನ್ ಭಾರತ, ಜಲ ಜೀವನ್ ಮಿಷನ್ ಸೇರಿದಂತೆ ಅನೇಕ ಯೊಜನೆಗಳು ಜಾರಿಯಲ್ಲಿವೆ.


ಧರ್ಮದ ವಿಚಾರದಲ್ಲಿ ಸಂವಿಧಾನದಲ್ಲಿ ಎಲ್ಲ ಧರ್ಮಗಳನ್ನು ಸಮಾನವಾಗಿ ಕಾಣುವಂತೆ ಹೇಳಿದೆ. ಆದರೆ, ಇವರು ಒಂದೇ ಧರ್ಮವನ್ನು ತುಷ್ಟೀಕರಣ ಮಾಡುವ ಕೆಲಸ ಮಾಡುತ್ತಾರೆ ಎಂದು ಆರೋಪಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button