
ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ನಾಳೆ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಯಾರೆಂದು ನಾಳೆ ಗೊತ್ತಾಗಲಿದೆ ಎಂದು ಹೇಳಿದ್ದಾರೆ.
ಚಿಕ್ಕಮಗಳೂರಿಗೆ ಭೇಟಿ ವಿಚಾರವಾಗಿ ಯಾವುದೇ ರಾಜಕೀಯ ಚರ್ಚೆಗೆ ಬಂದಿಲ್ಲ, ರಾಜಕೀಯದ ಬಗ್ಗೆ ಚರ್ಚೆ ಮಾಡಲು ಇಷ್ಟು ದೂರ ಬರಬೇಕಾ? ಮಾಜಿ ಸಚಿವ ಆರ್.ಅಶೋಕ್ ಅವರ ಹುಟ್ಟುಹಬ್ಬಕ್ಕಾಗಿ ಬಂದಿದ್ದೇವೆ. ಸಮಯ ಸಿಕ್ತು ಹಾಗಾಗಿ ಬಂದಿದ್ದೇವೆ. ಹುಟ್ಟುಹಬ್ಬ ಆಚರಣೆ ಮಾಡಿ ಈಗ ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದೇವೆ ಎಂದರು.
ಮಾಜಿ ಸಚಿವ ಆರ್.ಅಶೋಕ್ ಹುಟ್ಟು ಹಬ್ಬ ಆಚರಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸೆರಿದಂತೆ ಕೆಲ ಬಿಜೆಪಿ ನಾಯಕರು ಚಿಕ್ಕಮಗಳೂರಿನ ಕೈಮರ ಬಳಿಯ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ವಿಪಕ್ಷ ನಾಯಕನ ಆಯ್ಕೆ ಗೊಂದಲಗಳ ನಡುವೆಯೇ ರಿಲ್ಯಾಕ್ಸ್ ಮೂಡ್ ನಲ್ಲಿ ಮಾಜಿ ಸಿಎಂ ಕಾಲಕಳೆದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ