ಪ್ರಗತಿವಾಹಿನಿ ಸುದ್ದಿ; ಹಾವೇರಿ: ದೇಶದಲ್ಲಿ ವಿಪಕ್ಷಗಳು ಶಕ್ತಿಯುತವಾಗಿಲ್ಲ, ಪ್ರಾದೇಶಿಕ ಪಕ್ಷಗಳ ಸಂಖ್ಯೆಯೇ ಹೆಚ್ಚಿದೆ. ವಿಪಕ್ಷಗಳ ಸಭೆಯಿಂದ ಯಾವುದೇ ಪ್ರಯೋಜನವಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ನಾಳೆಯಿಂದ ಬೆಂಗಳೂರಿನಲ್ಲಿ ನಡೆಯಲಿರುವ ವಿಪಕ್ಷಗಳ ಮಹಾ ಮೈತ್ರಿಕೂಟ ಸಭೆ ವಿಚಾರವಾಗಿ ಮಾತನಾಡುತ್ತಾ, ವಿಪಕ್ಷನಾಯಕರು ಯಾವ ಸಭೆ ನಡೆಸಿದರೂ ರಾಜಕೀಯ ಲಾಭವೂ ಇಲ್ಲ, ಪ್ರಯೋಜನವೂ ಇಲ್ಲ. ಪ್ರಧಾನಿ ಮೋದಿಯವರನ್ನು ಸೋಲಿಸಬೇಕು ಎಂಬ ಒಂದೇ ಉದ್ದೇಶಕ್ಕೆ ಎಲ್ಲರೂ ಒಗ್ಗಟ್ಟಾಗುತ್ತಿದ್ದಾರೆ. ಇದರಿಂದಲೇ ಗೊತ್ತಾಗುತ್ತದೇ ಅವರಿಗೆ ಬಲವಿಲ್ಲ ಎಂಬುದು. ಇಂತಹ ಹಲವು ಸಭೆ ನಡೆಯಬಹುದು ಯಾವುದೂ ಪ್ರಯೋಜನವಾಗಲ್ಲ ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ವಿಪಕ್ಷ ನಾಯಕನ ಆಯ್ಕೆ ಇನ್ನೂ ಆಗಿಲ್ಲ. ಜುಲೈ 18ರ ಬಳಿಕ ಆಗಲಿದೆ ಎಂಬ ಸುದ್ದಿ ಇದೆ ಎಂದರು.
ಇನ್ನು ಮಾಜಿ ಸಚಿವ ವಿ.ಸೋಮಣ್ಣ ಸೇರಿದಂತೆ ಹಲವು ಬಿಜೆಪಿ ನಾಯಕರು ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿದ್ದಾರೆ ಎಂಬ ವಿಚಾರವಾಗಿ ಮಾತನಾಡಿದ ಮಾಜಿ ಸಿಎಂ, ಅದೆಲ್ಲವೂ ಕೇವಲ ಊಹಾಪೋಹಗಳು ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ