Cancer Hospital 2
Bottom Add. 3

*ಇದು ಝೀರೊ ಅನುದಾನ ಸರ್ಕಾರ; ಮಾಜಿ ಸಿಎಂ ಬೊಮ್ಮಾಯಿ ಕಿಡಿ*

ನಾವು ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಿರಲಿಲ್ಲ: ಬಸವರಾಜ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ಇದು ಝೀರೊ ಅನುದಾನ ಸರ್ಕಾರವಾಗಿದ್ದು, ಯಾರಿಗೂ ಅನುದಾನ ಬಿಡುಗಡೆ ಮಾಡುತ್ತಿಲ್ಲ. ನಾವು ಅನುದಾನ ಹಂಚಿಕೆಯಲ್ಲಿ ಯಾರಿಗೂ ತಾರತಮ್ಯ ಮಾಡಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌.


ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ವಿರೋಧ ಪಕ್ಷದ ಶಾಸಕರಿಗೆ ಅನುದಾನ ನೀಡಿದ್ದೇವೆ. ನಾವು ಎಲ್ಲರನ್ನೂ ಸಮಾನವಾಗಿ ನೀಡಿದ್ದೇವು ಎಂದರು.


ಮಾಗಡಿ ಶಾಸಕ ಎಚ್.‌ಸಿ ಬಾಲಕೃಷ್ಣ ಅವರು ಆಡಳಿತ ಪಕ್ಷದ ಶಾಸಕರಿಗೆ ಮಾತ್ರ ಅನುದಾನ ನೀಡುವುದಾಗಿ ಹೇಳಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಾಲಕೃಷ್ಞ ಅವರು ಸರ್ಕಾರ ಅಲ್ಲ. ಅವರು ಮೊದಲು ತಮ್ಮ ಅನುದಾನ ಪಡೆಯಲಿ. ಮಾಗಡಿಯಲ್ಲಿ ಹಿಂದೆ ನಮ್ಮ ಶಾಸಕರು ಇರಲಿಲ್ಲ ಆದರೂ ‌ಅವು ಅನುದಾನ ನೀಡಿದ್ದೆವು. ಬಾಲಕೃಷ್ಣ ಅವರು ಮೊದಲು ತಮಗೆ ಅನುದಾನ ಪಡೆಯಲಿ ನಾವು ನಮ್ಮ ಅನುದಾನ ಪಡೆದುಕೊಳ್ಳುತ್ತೇವೆ. ಈ ಸರ್ಕಾರದಲ್ಲಿ ಯಾರಿಗೂ ಅನುದಾನ ಇಲ್ಲ. ಇದು ಝಿರೊ ಅನುದಾನ ಸರ್ಕಾರ. ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುತ್ತಿಲ್ಲ ಎಂದು ಆರೋಪಿಸಿದರು.


ಇನ್ನು ಇದೊಂದು ರೈತ ವಿರೋಧಿ ಸರ್ಕಾರವಾಗಿದ್ದು, ನಮ್ಮ ರೈತರ ಪಂಪ್ಸೆಟ್ ಗಳಿಗೆ ವಿದ್ಯುತ್ ನೀಡದೆ ಬಂದ್ ಆಗಿವೆ. ಕಿಸಾನ್ ಸಮ್ಮಾನ್ ಹಣ ನೀಡಿಲ್ಲ. ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ನೀಡಿಲ್ಲ. ವಿದ್ಯಾನಿಧಿ, ರೈತ ಶಕ್ತಿ ಯೋಜನೆ ನಿಡಿದ್ದೇವೆ. ಅವೆಲ್ಲವನ್ನೂ ನಿಲ್ಲಿಸಿದ್ದಾರೆ ಎಂದರು.

Bottom Add3
Bottom Ad 2

You cannot copy content of this page