Latest

ಸಿಎಂ ಬೊಮ್ಮಾಯಿ ಭೇಟಿಯಾದ ಶರದ್ ಪವಾರ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಶರದ್ ಪವಾರ್ ಭೇಟಿಯಾಗಿ ಮಾತುಕತೆ ನಡೆಸಿದರು. ಅವರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೌಹಾರ್ದಯುತ ಮಾತುಕತೆ

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾದ ಶರದ್ ಪವಾರ್, ಕರ್ನಾಟಕ- ಮಹಾರಾಷ್ಟ್ರ ರಾಜ್ಯಗಳ ನಡುವಿನ ನೀರು ಹಂಚಿಕೆ ವಿಷಯದ ಕುರಿತು ಸಮಾಲೋಚನೆ ನಡೆಸಿದರು.

ಪ್ರವಾಹದ ಸಂದರ್ಭದಲ್ಲಿ ಪರಸ್ಪರ ಸಹಕಾರ ಹಾಗೂ ಜಲ ವಿವಾದಗಳನ್ನು ಬಗೆಹರಿಸಿಕೊಳ್ಳುವ ಸಂಬಂಧ ಚರ್ಚೆ ನಡೆಯಿತು ಎನ್ನಲಾಗಿದೆ. ಇದೇ ವೇಳೆ ಉಭಯ ರಾಜ್ಯಗಳ ನಡುವಿನ ಅಂತರಾಜ್ಯ ಜಲ ವಿಷಯ ಮತ್ತು ನದಿ ನೀರು ಹಂಚಿಕೆ ಕುರಿತು ವಿಸ್ತೃತ ಚರ್ಚೆ ನಡೆಸಲು ಶೀಘ್ರದಲ್ಲಿ ಸಭೆ ನಡೆಸಲು ಕೂಡ ತೀರ್ಮಾನಿಸಲಾಯಿತು ಎಂದು ತಿಳಿದುಬಂದಿದೆ.

ಬೆಳಗಾವಿ ಸೇರಿ 6 ಜಿಲ್ಲೆಗಳಲ್ಲಿ ಇಂದು ರಾತ್ರಿಯಿಂದಲೇ ವೀಕ್ ಎಂಡ್ ಕರ್ಫ್ಯೂ: ನಾಳೆ, ನಾಡಿದ್ದು ಏನೆಲ್ಲ ಇರಲಿದೆ?

Home add -Advt

Related Articles

Back to top button