Latest

ಪ್ರಮಾಣವಚನಕ್ಕೂ ಮುನ್ನ ದೇವರದರ್ಶನ; ಯಡಿಯೂರಪ್ಪ ಭೇಟಿಯಾದ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಬಸವರಾಜ್ ಬೊಮ್ಮಾಯಿ ದೇವಾಲಯಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬೆಂಗಳೂರಿನ ಸಂಜಯನಗರದಲ್ಲಿರುವ ರಾಧಾಕೃಷ್ಣ ದೇವಸ್ಥಾನದಲ್ಲಿ ಕುಟುಂಬಸ್ಥರ ಜೊತೆ ಪೂಜೆ ಸಲ್ಲಿಸಿದ ನಿಯೋಜಿತ ಮುಖ್ಯಮಂತ್ರಿ, ಬಳಿಕ ಆಂಜನೇಯ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

Related Articles
Home add -Advt

ನಂತರ ನೀಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮುಂಜಾನೆ ನಿರ್ಗಮಿತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಬಸವರಾಜ ಬೊಮ್ಮಾಯಿ ಅವರ ಬೆನ್ನು ತಟ್ಟಿ ಶುಭ ಹಾರೈಸಿದರು.

11 ಗಂಟೆಗೆ ಪ್ರಮಾಣವಚನ; ಸಂಪುಟ ರಚನೆ ಬಗ್ಗೆ ಮಹತ್ವದ ಮಾಹಿತಿ ತಿಳಿಸಿದ ನೂತನ ಸಿಎಂ

Related Articles

Back to top button