Kannada NewsKarnataka NewsLatestPolitics

*ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ನಿಷ್ಕ್ರೀಯ: ಮಾಜಿ ಸಿಎಂ ಬೊಮ್ಮಾಯಿ ಕಿಡಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಹೆಣ್ಣು ಮಕ್ಕಳ ಭ್ರೂಣ ಹತ್ಯೆ ಅವ್ಯಾಹತವಾಗಿ ನಡೆಯುತ್ತಿದೆ. ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ದೌರ್ಜನ್ಯ ಮಾಡಲಾಗಿದೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನಲ್ಲಿ ದಲಿತ ಶಾಲಾ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಚ ಮಾಡಲು ಬಳಕೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ನಿಷ್ಕ್ರೀಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.


ಈ ಕುರಿತು ಟ್ವೀಟ್ ಮಾಡಿರುವ ಅವರು, ಈ ಸರ್ಕಾರದಲ್ಲಿ ಯಾರಿಗೂ ಭಯ ಇಲ್ಲ. ಸರ್ಕಾರ ಅಧಿಕಾರಿಗಳ ಮೇಲೆ ಸಂಪೂರ್ಣ ಹಿಡಿತ ಕಳೆದು ಕೊಂಡಿದೆ ಎಂದು ಕಿಡಿಕಾರಿದ್ದಾರೆ.

ಇಲ್ಲಿ ಮಹಿಳೆಯರು, ಮಕ್ಕಳು, ದಲಿತರಿಗೆ ಸುರಕ್ಷತೆ ಇಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ಇದ್ದೂ ಸತ್ತಂತಾಗಿದ್ದು, ನಿರ್ಜೀವ ಸರ್ಕಾರಕ್ಕೆ ರಾಜ್ಯದ ಜನತೆ ಹಿಡಿ ಶಾಪ ಹಾಕುವಂತಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button