ಪ್ರಗತಿವಾಹಿನಿ ಸುದ್ದಿ; ಕಾಪು: ನೆರೆ ರಾಜ್ಯಗಳಲ್ಲಿ ಕೊರೋನಾ ಹೆಚ್ಚುತ್ತಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನೆರೆ ರಾಜ್ಯಗಳಿಂದ ರಾಜ್ಯ ಪ್ರವೇಶಿಸುವವರನ್ನು ತಪಾಸಣೆಗೆ ಒಳಪಡಿಸುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಉಡುಪಿ ಜಿಲ್ಲೆಯ ಕಾಪುದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಕುರಿತು ಆರೋಗ್ಯ ಸಚಿವ ಡಾ. ಸುಧಾಕರ ಹಾಗೂ ಟಾಸ್ಕ್ ಫೊರ್ಸ್ ಜತೆ ಸಮಾಲೋಚನೆ ನಡೆಸಿ ಸರ್ಕಾರದ ಮಟ್ಟದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.
ನೆರೆಯ ಕೇರಳ, ಮಹಾರಾಷ್ಟ್ರ ರಾಜ್ಯಗಳಲ್ಲಿ ಕೊರೊನಾ ಹೆಚ್ಚುತ್ತಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸಚಿವರು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ